IMD Weather Forecast: ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಮುನ್ಸೂಚನೆ
IMD Weather Forecast: ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಜೂನ್ 10) ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂದು (ಜೂನ್ 10) ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಹಾಗೂ ಇನ್ನೂ ಕೆಲವೆಡೆ ತಾಪಾಮನದಲ್ಲಿ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ತಾಪಮಾನವು 45°C ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಬಿಹಾರ, ಕರಾವಳಿ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಇದೇ ರೀಯ ವಾತಾವರಣ ಇರಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಎಲ್ಲೆಲ್ಲಿ ತಾಪಮಾನ ಏರಿಕೆ?: ಈಗಾಗಲೇ ಉತ್ತರ ಭಾರತದಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇದ್ದು, ನವದೆಹಲಿಯಲ್ಲಿ ತಾಪಮಾನ 43 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ. ಸೋಮವಾರ ಅಯನಗರದಲ್ಲಿ 45.3 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಿದೆ. ಇಂದು ಮಂಗಳವಾರ ಸಹ ನವದೆಹಲಿ ಸೇರಿದಂತೆ ಸುತ್ತಮುಯತ್ತಲಿನ ಪ್ರದೇಶಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜಸ್ಥಾನದಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಆಗುವ ಸಾಧ್ಯತೆಯಿದೆ. ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಉತ್ತರ ಭಾರತದ ಇತರ ಪ್ರದೇಶಗಳಲ್ಲೂ ಸಹ ಇದೇ ರೀತಿಯ ವಾತಾವಾರಣ ಮುಂದುವರೆಯಲೂಬಹುದು ಅಂತಲೂ ಎಚ್ಚರಿಕೆ ನೀಡಿದೆ.
ಹರಿಯಾಣದ ಸಿರ್ಸಾದಲ್ಲಿ 46.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಚಂಡೀಗಢದಲ್ಲಿ 43.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ರಾಜ್ಯದಲ್ಲೇ ಈ ಋತುವಿನ ಅತ್ಯಂತ ಹೆಚ್ಚಿನ ಪ್ರಮಾಣದ ತಾಪಮಾನದ ಆಗಿದೆ. ಪಂಜಾಬ್‌ನಲ್ಲಿ 46.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ದಾಖಲೆ ಮಟ್ಟದ ತಾಪಮಾನ ಆಗಿದೆ. ಫಿರೋಜ್‌ಪುರ, ಪಠಾಣ್‌ಕೋಟ್ ಮತ್ತು ಪಟಿಯಾಲದಲ್ಲಿಯೂ ಸಹ ದಾಖಲೆ ಮಟ್ಟದಲ್ಲಿ ತಾಪಮಾನ ದಾಖಲಾದ ಬಗ್ಗೆ ವರದಿಯಾಗಿದೆ.
ಎಲ್ಲೆಲ್ಲಿ ಮಳೆ?: ತಾಪಮಾನ ಏರಿಕೆ ನಡುವೆಯೂ ಇಂದು (ಜೂನ್ 10) ಅಸ್ಸಾಂ, ಮೇಘಾಲಯ ಮತ್ತು ಕರಾವಳಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಹರಿಯಾಣ, ಪಂಜಾಬ್ ಮತ್ತು ದೆಹಲಿಯಲ್ಲಿ ರಾತ್ರಿ ವೇಳೆ ಬಿಸಿಗಾಳಿ ಇರಲಿದ್ದು, ಹಗಲಿನ ವೇಳೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಹಲವು ದಿನಗಳವರೆಗೆ ಈ ಭಾಗದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದ್ದು, ಬಳಿಕ ಗುರುವಾರದಿಂದ ಗುಡುಗು ಸಹಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications