IMD Weather Forecast: ಈ ಭಾಗಗಳಲ್ಲಿ ಏಪ್ರಿಲ್ 1ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆ ಆಗುತ್ತಿದೆ. ಹಾಗೆಯೇ ಏಪ್ರಿಲ್ 1ರ ವರೆಗೆ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ಇನ್ನು ಕಳೆದ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡ್ಕಾ, ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಇಂದು (ಮಾರ್ಚ್ 29) ಇನ್ನೂ ಕೆಲವೇ ಕ್ಷಣಗಳಲ್ಲಿ ವಾಯುವ್ಯ ಭಾರತದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 20 ರಿಂದ 30 ಕಿ.ಮೀ ವೇಗದಲ್ಲಿ ಗಾಳಿ ಬಿಸುವ ಸಾಧ್ಯತೆಯಿದ್ದು, ಜೊತೆಗೆ ಮಳಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಬಿಹಾರ, ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹಲವೆಡೆ ಮಳೆ: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾರಡಿನ ಹಲವೆಡೆ, ದಕ್ಷಿಣ ತಮಿಳುನಾಡಿನ ಹಲವೆಡೆ ಏಪ್ರಿಲ್ 1ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 1 ರಂದು ಮಧ್ಯ ಮಹಾರಾಷ್ಟ್ರ, ಗೋವಾ, ಮಹಾರಾಷ್ಟ್ರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 31ರಂದು ಕೇರಳ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಮಾರ್ಚ್ 30ರಿಂದ ಏಪ್ರಿಲ್ 1ರ ವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮಾರ್ಚ್ 30ರ ವರೆಗೆ ಒಡಿಶಾದ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಇಂದು (ಮಾರ್ಚ್ 29) ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತು ಮಾರ್ಚ್ 30 ರಿಂದ ಏಪ್ರಿಲ್ 1ರ ವರೆಗೆ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಈ ಬಾರಿ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಬಾರಿ ಏನೆಲ್ಲಾ ಅವಾಂತರಗಳಿ ಸಂಭವಿಸುತ್ತವೆಯೂ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈಗಾಗಲೇ ಬಿರುಬಿಸಿಲಿನಿಂದ ಜನರು ಬೇಸತ್ತಿದ್ದು, ಮಳೆ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.












Click it and Unblock the Notifications