IMD Weather Forecast: ಈ ಭಾಗಗಳಲ್ಲಿ ಏಪ್ರಿಲ್ 10ರ ವರೆಗೂ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಏಪ್ರಿಲ್ 10ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇಂದು ಎಲ್ಲೆಲ್ಲಿ ಮಳೆ?: ಇಂದು (ಏಪ್ರಿಲ್ 7, ಸೋಮವಾರ ) ಬೆಳಗ್ಗೆ ಮಧುರೈನ ಕೆಲವು ಭಾಗಗಳಲ್ಲಿ ಮಳೆ ಸುರಿಯಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಅಲ್ಲದೆ ಇನ್ನೂ ಕೆಲವೇ ಕ್ಷಣಗಳಲ್ಲಿ ತಮಿಳುನಾಡು ಮತ್ತು ನೆರೆಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ: ಏಪ್ರಿಲ್ 7ರಂದು ಅಂದರೆ ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳದ ಪ್ರತ್ಯೇಕ ಭಾಗಗಳಲ್ಲಿ, ಏಪ್ರಿಲ್ 7 ಮತ್ತು 8ರಂದು ಕರ್ನಾಟಕದಾದ್ಯಂತ ಮಿಂಚು, ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಚಂಡಮಾರುತದ ಪರಿಚಲನೆ ಪರಿಣಾಮ ಹಲವು ಉತ್ತರ ಹಾಗೂ ದಕ್ಷಿಣದ ರಾಜ್ಯಗಳಲ್ಲಿ ಮಳೆಯಾಗಿದೆ. ಇನ್ನು ಏಪ್ರಿಲ್ 9 ಮತ್ತು 10ರಂದು ಅಸ್ಸಾಂ, ಮೇಘಾಲಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ: ಭಾರತೀಯ ಹವಾಮಾನ ಇಲಾಖೆ ಪ್ರಕರಾ, ಏಪ್ರಿಲ್ 9 ಮತ್ತು 10ರಂದು ಜಮ್ಮು-ಕಾಶ್ಮೀರ, ಲಡಾಖ್, ಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಬಿಹಾರದಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 6ರಿಂದ 7 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 7ರಿಂದ 9ರ ವರೆಗೆ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 35 ರಿಂದ 45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಎಚ್ಚರಿಕೆ ನೀಡಿದೆ.
ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಕೆರೆ, ಕಟ್ಟೆಗಳು, ನದಿ, ಪ್ರಮುಖ ಜಲಾಶಯಗಳು ಭರ್ತಿಯಾದ ಹಿನ್ನೆಲೆ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಹಾಗೆಯೇ ಈ ಬಾರಿ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಬಾರಿ ಏನೆಲ್ಲಾ ಅವಾಂತರಗಳಿ ಸಂಭವಿಸುತ್ತವೆಯೂ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈಗಾಗಲೇ ಬಿರುಬಿಸಿಲಿನಿಂದ ಜನರು ಬೇಸತ್ತಿದ್ದು, ಮಳೆ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.












Click it and Unblock the Notifications