IMD Weather Forecast: ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಏಪ್ರಿಲ್ 12ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಎಲ್ಲೆಲ್ಲಿ ಮಳೆ?: ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 12ರ ವರೆಗೆ ಅಸ್ಸಾಂ, ಮೇಘಾಲಯ, ತಮಿಳುನಾಡು, ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ತೆಲಂಗಾಣ, ಕರಾವಳಿ ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

IMD Weather Forecast Heavy Rainfall Forecast in These states till April 12

ಅಲ್ಲದೆ ಇದೇ ವೇಳೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಲಿಸ್ತಾನ್, ಮುಜಫರಾಬಾದ್, ಉತ್ತರಾಖಂಡ ಮತ್ತು ಮಧ್ಯಪ್ರದೇಶದ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಆಲಿಕಲ್ಲು ಮಳೆ ಸುರಿಯುವ ಎಚ್ಚರಿಕೆ: ಅದರಲ್ಲೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಪಮಾನದಲ್ಲಿ ಏರಿಕೆ: ಪಂಜಾಬ್, ಹರಿಯಾಣ, ನವದೆಹಲಿ ಮತ್ತು ಕಚ್‌ನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆ ಆಗುತ್ತಲೇ ಇದೆ. ಇನ್ನು ಇಂದು (ಏಪ್ರಿಲ್ 10) ವಾಯುವ್ಯ ಭಾರತದಲ್ಲಿ ಉಷ್ಣ ಅಲೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಡಾ.ನರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ಪಶ್ಚಿಮ ರಾಜಸ್ಥಾನದ ಹಲವು ಸ್ಥಳಗಳಲ್ಲಿ ಪ್ರತ್ಯೇಕವಾದ ಬಿಸಿಗಾಳಿ ಬೀಸುವ ಸಾಧ್ಯತೆ ಇದ್ದು, ಪ್ರತ್ಯೇಕವಾದ ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಮುಂದಿನ ಮೂರು ದಿನಗಳವರೆಗೆ ನವದೆಹಲಿಯಲ್ಲಿ ಇದೇ ರೀತಿ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಸಿದ್ದಾರೆ.

ಮುಂದಿನ ಹಲವು ದಿನಗಳವರೆಗೆ ರಾಜಸ್ಥಾನ, ಗುಜರಾತ್ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನವು ತೀವ್ರವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ನಡುವೆಯೂ ನವದೆಹಲಿಯ ಹಲವೆಡೆ ಮಳೆಯಾಗುವ ಸಾಧ್ಯತೆ ಶೇಕಡ 55ರಷ್ಟು ಇದ್ದು, ಹಗಲಿನ ವೇಳೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಇನ್ನು ಗರಿಷ್ಠ ತಾಪಮಾನವು 41 °C ದಾಟುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿದ್ದವು. ಹಾಗೆಯೇ ಈ ಬಾರಿ ಅಂದರೆ 2025ರಲ್ಲೂ ಕೂಡ ಮುಂಗಾರು ಮಳೆ ಆರ್ಭಟ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+