IMD Weather Forecast: ಈ ಭಾಗಗಳಲ್ಲಿ ಏಪ್ರಿಲ್ 5ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಏಪ್ರಿಲ್ 5ರ ವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಮಳೆ ಎಲ್ಲೆಲ್ಲಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದ ಪ್ರತ್ಯೇಕ ಸ್ಥಳಗಳಲ್ಲಿ ದಾಖಲೆಯ ಮಟ್ಟದಲ್ಲಿ ತಾಪಮಾನ ದಾಖಲಾಗಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿ ಬೀಸಿದೆ. ಇನ್ನು ಇಂದಿನಿಂದ ಅಂದರೆ ಮಾರ್ಚ್ 31ರಿಂದ ಏಪ್ರಿಲ್ 2 ರವರೆಗೆ ವಾಯುವ್ಯ ಭಾರತದಾದ್ಯಂತ ಗರಿಷ್ಠ ತಾಪಮಾನವು 5-7°C ನಷ್ಟು ಗಮನಾರ್ಹವಾಗಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 1 ರಿಂದ 3 ರವರೆಗೆ ಮಹಾರಾಷ್ಟ್ರ ಮತ್ತು ಪಕ್ಕದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಪಶ್ಚಿಮ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 30 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ತಿಳಿಸಿದೆ. ಏಪ್ರಿಲ್ 1ರಿಂದ 3ರ ವರೆಗೆ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಾರ್ಚ್ 31 ರಿಂದ ಏಪ್ರಿಲ್ 3ರ ವರೆಗೆ ಗುಜರಾತ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ತೆಲಂಗಾಣ ಮತ್ತು ಕರ್ನಾಟಕದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್ 1 ಮತ್ತು 2 ರಂದು ಮಧ್ಯ ಮಹಾರಾಷ್ಟ್ರ, ಏಪ್ರಿಲ್ 2 ಮತ್ತು 3ರಂದು ಕರಾವಳಿ ಕರ್ನಾಟಕ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 2 ಮತ್ತು 3ರಂದು ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 2 ರಿಂದ 5ರ ವರೆಗೆ ಕೇರಳ, ಇಂದು (ಮಾರ್ಚ್ 3) ಅರುಣಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆ ಆರ್ಭಟದಿಂದ ದೇಶದ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಮತ್ತೊಂದೆಡೆ ಕೆರೆ, ನದಿ, ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿತ್ತು. ಹಾಗೆಯೇ ಈ ಬಾರಿ ಕೂಡ ಮುಂಗಾರು ಮಳೆ ಆರ್ಭಟಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಈ ಬಾರಿ ಏನೆಲ್ಲಾ ಅವಾಂತರಗಳಿ ಸಂಭವಿಸುತ್ತವೆಯೂ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮತ್ತೊಂದೆಡೆ ಈಗಾಗಲೇ ಬಿರುಬಿಸಿಲಿನಿಂದ ಜನರು ಬೇಸತ್ತಿದ್ದು, ಮಳೆ ಯಾವಾಗ ಬರಲಿದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.












Click it and Unblock the Notifications