IMD Weather Forecast: ಈ ಭಾಗಗಳಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಚಳಿಗಾಲ ಮುಗಿಯುವ ಹಂತದಲ್ಲಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ತಾಪಮಾನ ದಿನದಿಂದ ದಿದಕ್ಕೆ ಏರಿಕೆಯಾಗುತ್ತಲೇ ಇದೆ. ಇದರ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಫೆಬ್ರವರಿ 24ರ ವರೆಗೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹಗಲಿನ ವೇಳೆ ತಾಪಮಾನವು 1ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಿದೆ. ಪಶ್ಚಿಮ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ 8 ರಾಜ್ಯಗಳಲ್ಲಿ ತಾಪಮಾನದಲ್ಲಿ ತಾಪಮಾನ ಕುಸಿತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ನಡುವೆಯೇ ಇಂದಿನಿಂದ ಅಂದರೆ ಫೆಬ್ರವರಿ 21ರಿಂದ 4 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಜಮ್ಮು-ಕಾಶ್ಮೀರ, ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್, ಪೂರ್ವ ರಾಜಸ್ಥಾನ, ಗುಜರಾತ್ ಪ್ರದೇಶದ ಕೆಲವು ಸ್ಥಳಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಪಶ್ಚಿಮ ಮಧ್ಯಪ್ರದೇಶ, ಕರ್ನಾಟಕ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮತ್ತು ಪಶ್ಚಿಮ ರಾಜಸ್ಥಾನದ ಕೆಲವು ಸ್ಥಳಗಳಲ್ಲಿ 1-3°Cರಷ್ಟು ಕುಸಿದಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಪೂರ್ವ ಮಧ್ಯಪ್ರದೇಶ, ಪೂರ್ವ ಭಾರತ, ಅಸ್ಸಾಂ ಮತ್ತು ಮೇಘಾಲಯ ಹೊರತುಪಡಿಸಿ ವಾಯುವ್ಯ ಭಾರತದ ಅನೇಕ ಸ್ಥಳಗಳಲ್ಲಿ ರಾತ್ರಿ ತಾಪಮಾನವು 1-4°C ರಷ್ಟು ಏರಿಕೆಯಾಗಿದೆ ಮತ್ತು ಪಶ್ಚಿಮ ಭಾರತ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಅನೇಕ ಸ್ಥಳಗಳಲ್ಲಿ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಈ ನಡುವೆಯೂ ದೇಶದ ಹಲವೆಡೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶದ ಹಲವೆಡೆ ಸಾಧಾರಣ ಮಳೆಯಾಗಿದೆ. ಉತ್ತರಾಖಂಡದ ಕೆಲವು ಸ್ಥಳಗಳಲ್ಲಿ, ಪಂಜಾಬ್‌ನ ಹೆಚ್ಚಿನ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ ಎಂದು ತಿಳಿಸಿದೆ.
ಅಲ್ಲದೆ, ಹರಿಯಾಣ, ಚಂಡೀಗಢ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರದ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಚಂಡಮಾರುತ ಪರಿಚಲನೆ: ಚಂಡಮಾರುತದ ಪರಿಚಲನೆ ಹಿನ್ನೆಲೆ ಫೆಬ್ರವರಿ 22ರಂದು ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದ, ಸಿಕ್ಕಿಂ ಮತ್ತು ಬಿಹಾರ, ಫೆಬ್ರವರಿ 21 ಮತ್ತು 23ರಂದು ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಗುಡುಗು, ಮಿಂಚು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಬ್ರವರಿ 22ರಂದು ಗಂಗಾ ನದಿಯ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪಾಕಿಸ್ತಾನ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಚಂಡಮಾರುತದ ಅಲೆಗಳ ಪ್ರಭಾವ ಬೀರಲಿದೆ. ಫೆಬ್ರವರಿ 24ರಂದು ವಾಯುವ್ಯ ಭಾರತದಲ್ಲಿ ಇದೇ ರೀತಿಯ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಪಮಾನದ ವಿವರ: ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2°C ಇಳಿಕೆಯಾಗುವ ಸಾಧ್ಯತೆ ಇದ್ದು, ನಂತರ ಯಾವುದೇ ಬದಲಾವಣೆ ಕಂಡುಬರುವುದಿಲ್ಲ. ಮುಂದಿನ 24 ಗಂಟೆಗಳಲ್ಲಿ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ ಮತ್ತು ಮುಂದಿನ ಮೂರು ದಿನಗಳಲ್ಲಿ 2°C ಇಳಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮುಂದಿನ 4-5 ದಿನಗಳಲ್ಲಿ ಭಾರತದ ಉಳಿದ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಇನ್ನು ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಕ್ರಮೇಣ 2-4°C ಇಳಿಕೆ ಮತ್ತು ನಂತರದ 4 ದಿನಗಳಲ್ಲಿ ಕ್ರಮೇಣ 3-4°C ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮುಂದಿನ 24 ಗಂಟೆಗಳಲ್ಲಿ ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆ ಇಲ್ಲ ಮತ್ತು ನಂತರದ 3 ದಿನಗಳಲ್ಲಿ ಕ್ರಮೇಣ 2°C ಇಳಿಕೆಯಾಗುವ ಸಾಧ್ಯತೆಯಿದೆ. ಈಗಾಗಲೇ ಫೆಬ್ರವರಿ 14, 2025ರಂದು ಪಂಜಾಬ್‌ನ ಆದಂಪುರದಲ್ಲಿ ಕನಿಷ್ಠ ತಾಪಮಾನ 4.2°C ದಾಖಲಾಗಿತ್ತು ಮತ್ತು ಫೆಬ್ರವರಿ 19, 2025 ರಂದು ಅನಂತಪುರ (ರಾಯಲಸೀಮಾ)ದಲ್ಲಿ ತಾಪಮಾನ ಗರಿಷ್ಠ 38.6°C ದಾಖಲಾಗಿತ್ತು ಎಂದು ತಿಳಿದುಬಂದಿದೆ.












Click it and Unblock the Notifications