IMD Weather Forecast: ಮಾರ್ಚ್‌ 1ರ ವರೆಗೆ ಈ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗುತ್ತಲಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್‌ 28ರ ವರೆಗೆ ಈ ಭಾಗದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, 2025ರ ಫೆಬ್ರವರಿ 25ರಿಂದ 28ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಹೆಚ್ಚಿನ ತೇವಾಂಶ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಣಾಮ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Forecast Heavy rainfall forecast in these states Till March 1 from February 24

ಫೆಬ್ರವರಿ 26 ರಿಂದ ಮಾರ್ಚ್ 1, 2025ರ ವರೆಗೆ ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಸಾಧಾರಣ ಮಳೆಯಾಗಲಿದೆ. ಫೆಬ್ರವರಿ 27ರಿಂದ ಮಾರ್ಚ್ 1ರ ವರೆಗೆ ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನ, ಪಶ್ಚಿಮ ರಾಜಸ್ಥಾನ, ಪೂರ್ವ ಉತ್ತರ ಪ್ರದೇಶ ರಾಜ್ಯಗಳಲ್ಲಿ ಮಳೆಯಾಗಲಿದೆ. ಫೆಬ್ರವರಿ 25 ಮತ್ತು 26ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಫೆಬ್ರವರಿ 24ರಂದು ಛತ್ತೀಸ್‌ಗಢ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕಳೆದ ವರ್ಷ ಅಂದರೆ 2024ರ ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಮಳೆ ಆರ್ಭಟಿಸಿದ ಪರಿಣಾಮ ರಾಜ್ಯದಲ್ಲಿನ ಪ್ರಮುಖ ಜಲಾಶಯಗಳು, ಕೆರೆ-ಕಟ್ಟೆಗಳು, ಹಳ್ಳಗಳು ತುಂಬಿ ಹರಿದಿದ್ದವು. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇದೀಗ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಸಂಪೂರ್ಣ ನೀರು ಇರುವ ಹಿನ್ನೆಲೆ ಈ ಬಾರಿ ನೀರಿನ ಅಬಾವ ಎದುರಾಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಆದರೂ ಈ ಬಾರಿ ಅಂದರೆ, 2025ರಲ್ಲಿ ಉತ್ತಮ ಮಳೆಯಾದರೆ, ಜಲಾಶಯಗಳು ಮತ್ತೆ ತುಂಬುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಈ ಬಾರಿ ಮೈಲಾರಲಿಂಗೇಶ್ವರನ ಕಾರ್ಣಿಕ ತುಂಬಿದ ಕೊಡ ತುಳುಕಿತಲೇ ಪರಾಕ್‌ ಎಂಬ ಭವಿಷ್ಯವಾಗಿ ಆಗಿದೆ. ಇದರ ಅರ್ಥ ವಿಶ್ಲೇಕರ ಪ್ರಕಾರ, ಉತ್ತಮ ಮಳೆ, ಬೆಳೆ ಆಗುತ್ತದೆ. ಆದರೆ ಭಾರೀ ಮಳೆಯಿಂದ ಬೆಳೆಗಳು ಕಿಚ್ಚಿಕೊಂಡು ಹೋಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಂದರೆ ಅತೀವೃಷ್ಟಿಯಾಗುವ ಸಾಧ್ಯತೆಯಿದೆ ಎಂದರ್ಥ.

ಇನ್ನು 2024ರಲ್ಲಿ ಕರ್ನಾಕದ ಪಕ್ಕದ ರಾಜ್ಯ ಕೇರಳದ ವಯನಾಡಿಲ್ಲಿ ಸಂಭವಿಸಿದ ಪ್ರವಾಹದಲ್ಲಿ ತುಂಬಾ ಜನ ಪ್ರಾಣ ಕಳೆದುಕೊಂಡಿದ್ದರು. ಇನ್ನೂ ಕೆಲವರು ಮಣಿನಡಿ ಸಿಲುಕಿ ಕಣ್ಮರೆಯಾದ ಘಟನೆಗಳು ಕೂಡ ನಡೆದಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+