IMD Weather Forecat: ಮಾರ್ಚ್ 11ರ ವರೆಗೂ ಬಿರುಗಾಳಿ ಮಳೆ ಸುರಿಯುವ ಮುನ್ಸೂಚನೆ
IMD Weather Forecat: ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್ 11ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ದೇಶಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಉತ್ತರ ಭಾತರತದ ರಾಜ್ಯಗಳಲ್ಲಿ ಚಳಿ ವಾತಾವರಭ ಮುಂದುವರೆದಿದೆ. ಮತ್ತೊಂದೆಡೆ ಮಾರ್ಚ್ 9ರಿಂದ ಪಶ್ಚಿಮ ಹಿಮಾಲಯ ಪ್ರದೇಶದದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಯಾವ್ಯಾವ ರಾಜ್ಯಗಳಲ್ಲಿ ಹವಾಮಾನ ಹೇಗಿರಲಿದೆ ಎಂದು ತಿಳಿಯಿರಿ.

ಮಾರ್ಚ್ 9-11ರ ವರೆಗೆ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಮಾರ್ಚ್ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಹೆಚ್ಚಿದೆ. ಮಾರ್ಚ್ 11ರಂದು ಉತ್ತರಾಖಂಡದಲ್ಲಿ ಇದೇ ರೀತಿಯ ವಾತಾರಣ ಇರಲಿದೆ ಎಂದು ತಿಳಿಸಿದೆ. ಹಾಗೆಯೇ ಈಶಾನ್ಯ ಅಸ್ಸಾಂ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಚಂಡಮಾರುತದ ಮುನ್ಸೂಚನೆ ಇದ್ದು, ಪರಿಣಾಮ ಮಾರ್ಚ್ 8ರಂದು ಬಿಹಾರದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮಾರ್ಚ್ 7 ಮತ್ತು 8ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನು ಮಾರ್ಚ್ 6ರಂದು ಅಂದರೆ ಇಂದು ದೆಹಲಿ ಸೇರಿದಂತೆ ವಾಯುವ್ಯ ಭಾರತದ ಹಲವು ಪ್ರದೇಶಗಳಲ್ಲಿ ಬಲವಾದ ಮೇಲ್ಮೈ ಗಾಳಿ ಗಂಟೆಗೆ 25-35 ಕಿಲೋ ಮೀಟರ್ನಿಂದ 45 ಕಿಲೋ ಮೀಟರ್ ಬೀಸುವ ಸಾಧತೆಯಿದೆ. ಇದೇ ವೇಳೆ ಕೇರಳ ಮತ್ತು ಮಾಹೆಯಲ್ಲಿ ತಾಪಮಾನದ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ ವಿವರ: ಮಾರ್ಚ್ 6 ಅಂದರೆ ಇಂದು ದೆಹಲಿಯಲ್ಲಿ ಗಂಟೆಗೆ 25-35 ಕಿಲೋ ಮೀಟರ್ನಿಂದ 45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 13 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಮಾರ್ಚ್ 7ರಿಂದ ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ಗೆ ಏರುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ತಾಪಮಾನ ದಾಖಲೆಯ ವಿವರ: ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಪ್ರಮಾಣದಲ್ಲಿ ಬದಲಾವಣೆಗಳಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ.
ಮುಂದಿನ 3 ದಿನಗಳಲ್ಲಿ ಪೂರ್ವ ಭಾರತದಲ್ಲಿಯೂ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆಯಾಗುವ ಮುನ್ಸೂಚನೆ ಇಲ್ಲ. ಆದರೆ, ಮುಂದಿನ 2-3 ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2-3°C ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇನ್ನು ಮುಂದಿನ 2 ದಿನಗಳಲ್ಲಿ ಮಹಾರಾಷ್ಟ್ರ, ತೆಲಂಗಾಣ, ಉತ್ತರ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆ ಉಂಟಾಗುವುದಿಲ್ಲ ಎಂದು ತಿಳಿಸಿದೆ.












Click it and Unblock the Notifications