IMD Weather Forecast: ಮಾರ್ಚ್ 12ರ ವರೆಗೂ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecat: ದೇಶದ ಬಹುತೇಕ ರಾಜ್ಯಗಳಲ್ಲಿ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್ 12ರ ವರೆಗೂ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹವಾಮಾನ ಇಲಾಖೆ ಪ್ರಕಾರ, ಮಾರ್ಚ್ 9ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ತಿಳಿಸಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್, ಮಾರ್ಚ್ 7ರಂದು ಅಂದರೆ ಇಂದು ಸಿಕ್ಕಿಂ , ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮಾರ್ಚ್ 9 ರಿಂದ 12ರ ವರೆಗೆ ಜಮ್ಮು , ಕಾಶ್ಮೀರ , ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮಾರ್ಚ್ 10ರಿಂದ 12ರ ವರೆಗೆ ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಸಾಧಾರಣ ಮಳೆ, ಮಾರ್ಚ್ 8ರಂದು ಬಿಹಾರದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮಾರ್ಚ್ 7 ಮತ್ತು 8ರಂದು ಸಿಕ್ಕಿಂನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 7 ರಂದು ಅಂದರೆ ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಂಜು ಕವಿದ ವಾತಾವರಣ ಇತ್ತು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ 3-4 ದಿನಗಳಲ್ಲಿ ವಾಯುವ್ಯ, ಮಧ್ಯ ಭಾರತದ ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಗುಜರಾತ್ ರಾಜ್ಯದಲ್ಲಿ ಗರಿಷ್ಠ ತಾಪಮಾನವು 3-5°Cರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 8ರಂದು ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ ಗರಿಷ್ಠ ತಾಪಮಾನದಲ್ಲಿ ಕ್ರಮೇಣ 2-4°C ಏರಿಕೆ ಕಂಡುಬರಲಿದೆ ಎಂದು ತಿಳಿಸಿದೆ.
ಮಾರ್ಚ್ 7 ರಿಂದ 8ರವರೆಗೆ ಕೊಂಕಣ, ಗೋವಾ, ಕೇರಳ, ಮಾಹೆ ಮತ್ತು ಕರಾವಳಿ ಕರ್ನಾಟಕದಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಮಾರ್ಚ್ 7ರಂದು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನ ಮತ್ತು ಮಾರ್ಚ್ 9 ರಿಂದ 10ರ ವರೆಗೆ ಗುಜರಾತ್ ಪ್ರದೇಶದಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಈ ಬಾರಿ ಅಂದರೆ 2025ರಲ್ಲಿಯೂ ಕೂಡ ಮುಂಗಾರು ಆರ್ಭಟಿಸಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications