IMD Weather Forecast: ಮಾರ್ಚ್ 4 ರವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಚಳಿಯ ಮಾಯವಾಗಿದ್ದು, ಬೇಸಿಗೆಗೂ ಮುನ್ನ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮಾರ್ಚ್ 4ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಾಂಗಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಭಾರತದಾದ್ಯಂತ ಹವಾಮಾನದಲ್ಲಿ ಭಾರೀ ಬದಲಾವಣೆಗಳು ಆಗುತ್ತಿವೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಬೇಸಿಗೆಗೂ ಮುನ್ನವೇ ತಾಪಮಾನ ಪ್ರಮಾಣದಲ್ಲಿ ಏರಿಕೆ ಆಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಬ್ರವರಿ 27 ಮತ್ತು 28ರಂದು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಂತರ ಮಳೆಯ ಪ್ರಮಾನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್ ಮತ್ತು ಹರಿಯಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಫೆಬ್ರವರಿ 27ರಿಂದ ಮಾರ್ಚ್ 1 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನ, ಫೆಬ್ರವರಿ 27ರಿಂದ ಮಾರ್ಚ್ 2ರ ವರೆಗೆ ತಮಿಳುನಾಡಿನ ಪುದುಚೇರಿ, ಕಾರೈಕಲ್ ಮತ್ತು ಕೇರಳದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 1 ಮತ್ತು 2ರಂದು ಲಕ್ಷದ್ವೀಪ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮಾರ್ಚ್ 2ರಿಂದ ವಾಯುವ್ಯ ಭಾರತದ ಮೇಲೆ ಹೊಸ ಚಂಡಮಾರುತದ ಬೀರುವ ಸಾಧ್ಯತೆ ಹಿನ್ನೆಲೆ ಈ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 2 ಮತ್ತು ಮಾರ್ಚ್ 4ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡದ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಫೆಬ್ರವರಿ 27ರಂದು ಅಂದರೆ ಇಂದು ಗುಜರಾತ್‌ನಲ್ಲಿ ಮತ್ತು ಫೆಬ್ರವರಿ 27 ಮತ್ತು 28ರಂದು ಕೊಂಕಣ ಮತ್ತು ಗೋವಾ, ಕರಾವಳಿ ಕರ್ನಾಟಕದ ಭಾಗದಲ್ಲಿ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ನವದೆಹಲಿ ಹವಾಮಾನದ ವಿಚಾರಕ್ಕೆ ಬಂದರೆ, ಇಂದು (ಫೆಬ್ರವರಿ 27) ಬೆಳಗ್ಗೆ ದಟ್ಟ ಮಂಜಿನ ನಡುವೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಪರಿಣಾಮ ವಾಹನ ಸವಾರರಿಗೆ ಹಲವೆಡೆ ಅಡಚಣೆ ಉಂಟಾಗಿ ಪರದಾಡಿದ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ತಾಪಾಮನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಕಳೆದ ವರ್ಷ ಅಂದರೆ, 2024ರಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಅದರಲ್ಲೂ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಪ್ರವಾಹದಂತಹ ವಾತಾವರಣ ಸೃಷ್ಟಿಯಾಗಿ ಅವಾಂತರಗಳೇ ಸೃಷ್ಟಿಯಾಗಿದ್ದವು. ಮತ್ತೊಂದೆಡೆ ದಕ್ಷಿಣ ಭಾರತದ ಕೇರಳದ ವಯನಾಡಿನಲ್ಲಿ ಪ್ರವಾಹ ಬಂದು ಗುಡ್ಡ ಕುಸಿದು ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿತ್ತು.
ಮತ್ತೊಂದೆಡೆ ನೋಡೋದಾದ್ರೆ, ಕಳೆದ ವರ್ಷ ಸುರಿದ ಮುಂಗಾರು ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದ ಪರಿಣಾಮ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಯಾಕಂದ್ರೆ ಅದರ ಹಿಂದಿನ ವರ್ಷ ಅಂದ್ರೆ 2023ರಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಭಾಗಗಳಲ್ಲಿ ರೈತರು ಬೆಳೆದ ಬೆಳೆಗಳೆಲ್ಲ ಸೂರ್ಯ ಶಾಖಕ್ಕೆ ಸುಟ್ಟು ಹೋಗಿದ್ದವು. ಇನ್ನೂ ಈ ಬಾರಿ ಅಂದರೆ 2025ರಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications