IMD Weather Forecast: ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಚಳಿ ಪ್ರಮಾಣ ಕಡಿಮೆಯಾಗಿದೆ. ಮತ್ತೊಂದೆಡೆ ಬೇಸಿಗೆಗೂ ಮುನ್ನ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆ ಸುರಿಯುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮಾರ್ಚ್ 5ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಇಂದು (ಫೆಬ್ರವರಿ 28) ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದ್ದರೆ, ಹಿಮಾಚಲ ಪ್ರದೇಶದಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಲ್ಲದೆ ಇಂದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಚಂಡೀಗಢದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 28 ಮತ್ತು ಮಾರ್ಚ್ 1ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 1ರಂದು ಅರುಣಾಚಲ ಪ್ರದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದ ಹವಾಮಾನ: ಇಂದು (ಪೆಬ್ರವರಿ 28) ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದ ಹಲವೆಡೆ ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಫೆಬ್ರವರಿ 28 ಮತ್ತು ಮಾರ್ಚ್ 1ರಂದು ತಮಿಳುನಾಡಿನ ಪ್ರತ್ಯೇಕ ಭಾಗಗಳಲ್ಲಿ, ಮಾರ್ಚ್ 1ರಂದು ಕೇರಳದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಮಾರ್ಚ್ 2ರಿಂದ ವಾಯುವ್ಯ ಭಾರತದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 2 ರಿಂದ 5 ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 3ರಂದು ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ತಾಪಮಾನ ದಾಖಲೆಯ ವಿವರ: ಎರಡು ದಿನಗಳ ನಂತರ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 2-4°C ರಷ್ಟು ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನದಲ್ಲಿ 3-5°C ನಷ್ಟು ಕಡಿಮೆಯಾಗಲಿದ್ದು, ನಂತರ ಕ್ರಮೇಣ 4-6°C ರಷ್ಟು ಏರಿಕೆಯಾಗಲಿದೆ. ಕೊಂಕಣ ಮತ್ತು ಗೋವಾ ಸೇರಿದಂತೆ ಪಶ್ಚಿಮ ಕರಾವಳಿ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನವು 2-3°C ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕರಾವಳಿ ಪ್ರದೇಶಗಳ ಹವಾಮಾನ ವಿವರ: ಪಶ್ಚಿಮ ಕರಾವಳಿ ಪ್ರದೇಶದ ಕೆಲವು ಭಾಗಗಳಲ್ಲಿ ತಪಾಮಾನ ಪ್ರಮಾಣ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಫೆಬ್ರವರಿ 28ರಂದು ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆಗಳ ವಾತಾವರಣ ಇರಲಿದೆ. ಫೆಬ್ರವರಿ 28ರಿಂದ ಮಾರ್ಚ್ 1 ರವರೆಗೆ ಕರಾವಳಿ ಕರ್ನಾಟಕದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಫೆಬ್ರವರಿ 28ರಂದು ಬೆಳಗ್ಗೆ ಮಂಜು ಕವಿದ ವಾತಾವರಣ ಇದ್ದು, ಇದೀಗ ಬಿಸಿಲಿನ ವಾತಾವರಣ ಮುಂದುವರೆದಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 1 ಮತ್ತು 2ರಂದು ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.












Click it and Unblock the Notifications