IMD Weather Forecast: ಮೇ 15ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ಸದ್ಯ ರಣಬಿಸಿಲು ಮುಂದುವರೆದಿದೆ. ಈ ನಡುವೆಯೇ ಹಲವದಡೆ ಮುಂಗಾರಿಗೂ ಮುಂಚೆಯೇ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮೇ 15ರ ವರೆಗೂ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆಯು ಮುಂದಿನ ಹಲವು ದಿನಗಳ ಕಾಲ ನವದೆಹಲಿ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಸೋಮವಾರ ನವದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 39°C ಮತ್ತು 26°C ದಾಖಲಾಗುವ ಸಾಧ್ಯತೆಯಿದೆ. ಅಲ್ಲದೆ, ಗಂಟೆಗೆ 25-35 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಅಂತಲೂ ತಿಳಿಸಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಜೊತೆಗೆ ಗಂಟೆಗೆ 50-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 13ರಂದು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ, ಮೇ 15ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಮೇ 12ರಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಮೇ 13-14ರಂದು ನಿಕೋಬಾರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕಳೆದ ಬಾರಿ ಅಂದರೆ 2024ರಲ್ಲಿ ಮುಂಗಾರು ಮಳೆಯಿಂದ ದೇಶದ ಬಹುತೇಕ ಭಾಗಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಅದರಲ್ಲೂ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಹಾಗೂ ದಕ್ಷಿಣ ಭಾರತದ ವಿಚಾರಕ್ಕೆ ಬಂದರೆ, ಕೇರಳದ ವಯನಾಡಿಯಲ್ಲಿ ಅಪಾಯ ಪ್ರಮಾಣದ ಹಾನಿಯಾಗಿತ್ತು. ಕೆಲವೆಡೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿತ್ತು.
ಮತ್ತೊಂದೆಡೆ ನೋಡೋದಾದ್ರೆ ಭಾರೀ ಮಳೆಯಾಗಿದ್ದರಿಂದ ಪ್ರಮುಖ ಕೆರೆ, ಕಟ್ಟೆಗಳು, ನದಿ-ಹಳ್ಳಗಳು, ಜಲಾಶಯಗಳು ತುಂಬಿ ಹರಿದಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿತ್ತು. ಇನ್ನೂ ಈ ಬಾರಿಯೂ ಅಂದರೆ 2025ರಲ್ಲಿ ಅವಧಿಗೂ ಮುನ್ನ ಮುಂಗಾರು ಮಳೆ ಎಂಟ್ರಿ ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ರಣ ಬಿಸಿಲಿಗೆ ಬೆಂದಿರುವ ಜನರು ಯಾವಾಗ ಮಳೆರಾಯ ಎಂಟ್ರಿ ಕೊಡಲಿದ್ದಾನೆಯೋ ಎಂದು ಕಾದು ಕುಳಿತಿದ್ದಾರೆ.












Click it and Unblock the Notifications