IMD Weather Forecast: ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನಲೆ ದೇಶದ ಬಹುತೇಕ ರಾಜ್ಯಗಳಲ್ಲಿ ರಣಭೀಕರ ಬಿಸಿಲಿನ ನಡುವೆಯೂ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಈ ಭಾಗಗಳಲ್ಲಿ ಮೇ 23ರ ವರೆಗೂ ಗುಡುಗು, ಮಿಂಚು ಸಹಿತ ರಣಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೇಶದ ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆ ಇದ್ದು, ಕೆಲವೆಡೆ ಬಿಸಿಲಿನ ನಡುವೆಯೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಚಂಡಮಾರುತ ಪರಿಣಾಮ ಪಶ್ಚಿಮ ಬಂಗಾಳ, ಸಿಕ್ಕಿಂ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಾಳೆಯಾಗುವ ಸಾಧ್ಯತೆಯಿದೆ. ಈ ನಡುವೆಯೇ ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮುವಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.
ಮತ್ತೊಂದೆಡೆ ಈಗಾಗಲೇ ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡಿದೆ. ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್, ಬಂಗಾಳಕೊಲ್ಲಿಗೆ ತಲುಪಿದೆ. ಅಲ್ಲದೆ, ಅಂಡಮಾನ್ ದ್ವೀಪಗಳನ್ನು ಸಹ ಆವರಿಸಿದೆ. ಅಲ್ಲದೆ, ಮುಂದಿನ 3-4 ದಿನಗಳಲ್ಲಿ ಮಧ್ಯ ಮತ್ತು ಈಶಾನ್ಯ ಬಂಗಾಳಕೊಲ್ಲಿ ಭಾಗದಲ್ಲಿ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿ ಕರ್ನಾಟಕದಲ್ಲಿ ಮೇ 22ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 18-23ರ ವರೆಗೆ ಪಂಜಾಬ್, ಉತ್ತರ ಪ್ರದೇಶ, ಅಸ್ಸಾಂ, ತೆಲಂಗಾಣದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ: ಮೇ 23ರ ವರೆಗೆ ಈಶಾನ್ಯ ಭಾರತದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 30-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಅಂತಲೂ ಐಎಂಡಿ ಮುನ್ಸೂಚನೆ ನೀಡಿದೆ. ಇನ್ನು ಇಂದು (ಮೇ 18) ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಅಲ್ಲಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದದಲ್ಲಿ ಎಲ್ಲೆಲ್ಲಿ ಮಳೆ?: ಮೇ 23ರ ವರೆಗೂ ಕೇರಳ, ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅದರಲ್ಲೂ ಮೇ 20ರಂದು ಕೇರಳ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ.
ಪಶ್ಚಿಮ ಭಾರತದದಲ್ಲಿ ಎಲ್ಲೆಲ್ಲಿ ಮಳೆ?: ಮಹಾರಾಷ್ಟ್ರ, ಗುಜರಾತ್ ಮತ್ತು ಕೊಂಕಣ-ಗೋವಾದ ಹಲವು ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಮಹಾರಾಷ್ಟ್ರದ ಮರಾಠವಾಡದಲ್ಲಿ ಗಂಟೆಗೆ 70 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವುದರ ಜೊತೆಗೆ, ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಪೂರ್ವ ಮತ್ತು ಮಧ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮೇ 21ರ ವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್ ಮತ್ತು ಬಿಹಾರದಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಮಳೆ ಜೊತೆ ಗಂಟೆಗೆ 70 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಅಲ್ಲದೆ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹವಾಮಾನ: ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಚದುರಿದದಂತೆ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಪೂರ್ವ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಹಗುರವಾದ ಮಳೆಯಾಗಲಿದೆ. ಪಶ್ಚಿಮ ರಾಜಸ್ಥಾನದಲ್ಲಿ ಈ ವಾರ ಭಾರೀ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಈ ಭಾಗಗಳಲ್ಲಿ ಕೆಲವು ಪ್ರದೇಶಗಳಲ್ಲಿ ಮಳೆಯಾದರೆ, ಇನ್ನು ಕೆಲವು ಪ್ರದೇಶಗಳಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಜಮ್ಮುವಿನ ಕೆಲವು ಭಾಗಗಳಲ್ಲಿ ಮುಂದಿನ ಶಾಖದ ಅಲೆಯ ಪರಿಸ್ಥಿತಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನದ ವಿವರ: ಮೇ 20ರ ವರೆಗೂ ನವದೆಹಲಿಯಲ್ಲಿ ಬಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಬೀಳಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಗರಿಷ್ಠ ತಾಪಮಾನವು 40-43°C ವರೆಗೆ ದಾಖಲಾಗುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications