IMD Weather Forecast: ಮೇ 27ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ಈಗಾಗಲೇ ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯಾಗಿದೆ. ಹಾಗೆಯೇ ಇದೀಗ ಇದೇ ಪರಿಸ್ಥಿತಿ ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಪರಿಣಾಮ ಈ ಭಾಗಗಳಲ್ಲಿ ಮೇ 27ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಹಿನ್ನೆಲೆ ದೇಶದ ಹಲವೆಡೆ ಗಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ?: ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಇಂದು (ಮೇ 23) ಮಹಾರಾಷ್ಟ್ರ ಮತ್ತು ಗೋವಾದ ಹಲವು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಈ ಭಾಗಗಳಲ್ಲಿ ಮುಂದಿನ ಹಲವು ದಿನಗಳವರೆಗೂ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಅಂತಲೂ ಎಂದು ತಿಳಿಸಿದೆ.
ರೆಡ್ ಅಲರ್ಟ್ ಘೋಷಣೆ: ಮೇ 23ರ ಶುಕ್ರವಾರ ಗೋವಾ, ರಾಯಗಡ ಮತ್ತು ರತ್ನಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ಮುಂಬೈ, ಥಾಣೆ, ಪಾಲ್ಘರ್, ಸಿಂಧುದುರ್ಗ, ಪುಣೆ ಮತ್ತು ಸತಾರಾದ ಘಾಟ್‌ಗಳಲ್ಲಿಯೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಆರೆಂಜ್ ಅಲರ್ಟ್ ಘೋಷಣೆ: ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ ಹಿನ್ನೆಲೆ ಮೇ 23 ಮತ್ತು 24ರಂದು ಮುಂಬೈಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆ ಜೊತೆ ಇಲ್ಲಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಕೊಂಕಣ ಮತ್ತು ಗೋವಾದ ಕರಾವಳಿ ಮೇಲೆ ಈಗಾಗಲೇ ಚಂಡಮಾರುತದ ಪ್ರಭಾವ ಬೀರಿದ್ದು, ಭಾರೀ ಮಳೆಯಾಗುತ್ತಿದೆ. ಇದು ತೀವ್ರಗೊಂಡು ಮಹಾರಾಷ್ಟ್ರದ ಮೇಲೂ ಪರಿಣಾಮ ಬೀರುವ ಸಾಧ್ಯತೆಯೂ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮಿನುಗಾರರಿಗೆ ಪ್ರಮುಖ ಸೂಚನೆ: ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಮೇ ಮೇ 24ರಿಂದ 27ರ ವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಮತ್ತೊಂದೆಡೆ ಮುಂದಿನ 2-3 ದಿನಗಳಲ್ಲಿ ಕೇರಳದಲ್ಲಿ ಮುಂಗಾರು ಎಂಟ್ರಿ ಕೊಡುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 23 ಮತ್ತು 24ರಂದು ಹಿಮಾಚಲ ಪ್ರದೇಶ, ಉತ್ತರಾಖಂಡ, ಮೇ 23 ರಿಂದ 25ರ ವರೆಗೆ ಪಶ್ಚಿಮ ರಾಜಸ್ಥಾನದಲ್ಲಿ ಭಾರೀ ಮಳೆ ಜೊತೆಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ತಾಪಮಾನ ಏರಿಕೆ?: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮೇ 24ರ ವರೆಗೆ ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿ, ಮೇ 23ರಂದು ಜಮ್ಮು, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಮಧ್ಯಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದ ಎಂದು ಮುನ್ಸೂಚನೆ ನೀಡಿದೆ. ಮೇ 24ರ ವರೆಗೆ ಪಶ್ಚಿಮ ರಾಜಸ್ಥಾನದಲ್ಲಿ ರಾತ್ರಿ ವೇಳೆ ಬೆಚ್ಚಗಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications