IMD Weather Forecast: ಚಂಡಮಾರುತ ಪರಿಣಾಮ ಈ ಭಾಗಗಳಲ್ಲಿ ನವೆಂಬರ್ 27ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಲಿದೆ. ಈ ನಡುವೆಯೇ ಕೆಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಬಂಗಾಳಕೊಲ್ಲಿಯಲ್ಲಿ "ಸೆನ್ಯಾರ್" ಚಂಡಮಾರುತ ಪರಿಣಾಮ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಸದ್ಯ ದೇಶಾದ್ಯಂತ ಚಳಿ ಆವರಿಸಿದೆ. ಈ ನಡುವೆಯೇ ಚಂಡಮಾರುತದ ಪ್ರಭಾವ ಹಿನ್ನೆಲೆ ಚಳಿಯ ನಡುವೆಯೂ ಮುಂದಿನ ಹಲವು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದಂತೆ ಇತರ ಭಾಗಗಳಲ್ಲಿ ಚಳಿಯ ಜೊತೆ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ "ಸೆನ್ಯಾರ್" ಚಂಡಮಾರುತವು ಯಾವೆಲ್ಲಾ ರಾಜ್ಯಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ, ನವೆಂಬರ್ 27ರ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ನವೆಂಬರ್ 25 ರವರೆಗೆ ತಮಿಳುನಾಡು, ನವೆಂಬರ್ 26ರ ವರೆಗೆ ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆ, ನವೆಂಬರ್ 23ರಂದು ಲಕ್ಷದ್ವೀಪ, ನವೆಂಬರ್ 23 ಮತ್ತು 24ರಂದು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮತ್ತು ರಾಯಲಸೀಮಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 26ರ ವರೆಗೆ ಕರಾವಳಿ ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಇಂದು (ನವೆಂಬರ್ 23) ನಿಕೋಬಾರ್ ದ್ವೀಪದ ಅಲ್ಲಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 7 ರಿಂದ 20 ಸೆಂ.ಮೀ. ಮಳೆ ಬೀಳುವ ಸಾಧ್ಯತೆಯಿದೆ. ಅಂಡಮಾನ್‌ನಲ್ಲಿ 7-11 ಸೆಂ.ಮೀ. ವರೆಗೂ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ. ನಿಂದ 55 ಕಿ.ಮೀ. ವೇಗದವರೆಗೂ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಹವಾಮಾನ ಹದಗೆಡುತ್ತಿದ್ದು, ಸಮುದ್ರದ ಪರಿಸ್ಥಿತಿ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ಕೆಲ ದಿನಗಳ ಕಾಲ ಮೀನುಗಾರರು ಅಂಡಮಾನ್ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಪ್ರವಾಸಿಗರು, ಸ್ಥಳೀಯ ದ್ವೀಪವಾಸಿಗಳು ಮತ್ತು ದೋಣಿ ಮಾಲೀಕರು ತಮ್ಮ ದೋಣಿಗಳನ್ನು ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ. ಸಮುದ್ರ ತೀರದಲ್ಲಿ ಅಲೆಗಳ ರಭಸ ಹೆಚ್ಚಾಗುತ್ತಿರುವ ಹಿನ್ನೆಲೆ ಮೀನುಗಾರರು ಸಮುದ್ರದ ಆಳಕ್ಕೆ ಇಳಿಯಬಾರದು. ಪ್ರವಾಸಿಗರು ಕೆಲವು ದಿನಗಳವರೆಗೆ ಈ ಭಾಗಗಳಿಗೆ ಪ್ರವಾಸ ಕೈಗೊಳ್ಳುವುದನ್ನು ಮುಂದೂಡಿಕೆ ಮಾಡುವುದು ಒಳಿತು ಅಂತಲೂ ತಿಳಿಸಲಾಗಿದೆ. ಒಂದು ವೇಳೆ ಈಗಾಗಲೇ ಪ್ರವಾಸಿಗರು ಪ್ರವಾಸಕ್ಕೆ ಬಂದಿದ್ದರೆ, ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದೆ. ಸಮುದ್ರ ಅಲೆಗಳ ರಭಸ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಳ ಆಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications