IMD Weather Forecast: ಈ ಭಾಗಗಳಲ್ಲಿ ನವೆಂಬರ್ 6ರ ವರೆಗೂ ರಣಭೀಕರ ಮಳೆ ಮುನ್ಸೂಚನೆ
IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಚಳಿ ನಡುವೆಯೂ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಕೆಲವೆಡೆ ಸಾಧಾರಣೆ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ಮೋಂಥಾ ಚಂಡಮಾರುತ ಪರಿಣಾಮ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಅವಾಂತರಗಳೇ ಸಂಭವಿಸಿವೆ.

ಇನ್ನೂ ಇದೀಹ ದೇಶದ ಹಲವು ರಾಜ್ಯಗಳಲ್ಲಿ ನವೆಂಬರ್ 6ರ ವರೆಗೆ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಲಿದೆ. ಈ ವೇಳೆ ಈಶಾನ್ಯ ಮತ್ತು ಆಗ್ನೇಯ ಭಾಗದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಅಲ್ಲದೆ, ಇದೇ ವೇಳೆ ವಾಯುವ್ಯ ಮತ್ತು ಮಧ್ಯ ಭಾರತದ ಹಲವೆಡೆಯೂ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಶೀತಗಾಳಿ ಇರಲಿದೆ ಎಂದು ತಿಳಿಸಿದೆ.
ಈ ವಾರ ಪೂರ್ತಿ ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ವಾಯುವ್ಯ ಭಾರತದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಈ ರಾಜ್ಯಗಳಲ್ಲಿ ಕನಿಷ್ಠ ತಾಪಮಾನವು 15 ರಿಂದ 18 ಡಿಗ್ರಿ ಸೆಲ್ಸಿಯಸ್‌ವೆಗೆ ದಾಖಲಾಗುವ ಸಾಧ್ಯತೆಯಿದೆ. ಆದರೆ ಬೆಳಗ್ಗೆ ಮತ್ತು ರಾತ್ರಿ ವೇಳೆ ಚಳಿ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ನವೆಂಬರ್ 5 ರ ವರೆಗೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದ್ದು, ನವೆಂಬರ್ ಎರಡನೇ ವಾರದಿಂದ ಬೀಕರ ಚಳಿ ಇರಲಿದೆ ಎಂದು ತಿಳಿಸಿದೆ. ನವೆಂಬರ್ 5ರ ವರೆಗೆ ಈಶಾನ್ಯ ಮತ್ತು ಆಗ್ನೇಯ ಭಾಗದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ, ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಭೀಕರ ಚಳಿ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಉತ್ತರ ಪ್ರದೇಶದ ಹವಾಮಾನ ಇಲಾಖೆಯ ಪ್ರಕಾರ, ಪೂರ್ವ ಉತ್ತರ ಪ್ರದೇಶದಲ್ಲಿ ಮಳೆಯಾಗಲಿದ್ದು, ತಾಪಮಾನದಲ್ಲಿನ ಕುಸಿತ ಕಾಣುವ ಸಾಧ್ಯತೆಯಿದೆ. ಬೆಳಗ್ಗೆ ಮತ್ತು ಸಂಜೆ ವೇಳೆಗೆ ಹೆಚ್ಚು ಚಳಿ ಇರಲಿದೆ ಎಂದು ತಿಳಿಸಿದೆ. ಮತ್ತೊಂದೆಡೆ ಪೂರ್ವ ರಾಜಸ್ಥಾನದ ಕೋಟಾ, ಉದಯಪುರ ಮತ್ತು ಅಜ್ಮೀರ್ ವಿಭಾಗಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು (ನವೆಂಬರ್ 3) ಕರಾವಳಿ ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 3ರಿಂದ 5 ರ ವರೆಗೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ. ಗುಜರಾತ್‌ನಲ್ಲಿ, ಈ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹವಾಮಾನ: ಇನ್ನೂ ದಕ್ಷಿಣದ ರಾಜ್ಯಗಳಾದ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಚಳಿ ಆವರಿಸಿದೆ.












Click it and Unblock the Notifications