IMD Weather Forecast: ಈ ಭಾಗಗಳಲ್ಲಿ ಅಕ್ಟೋಬರ್ 28ರ ವರೆಗೂ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಅಕ್ಟೋಬರ್ 28ರ ವರೆಗೆ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ವಾಯುಭಾರ ಕುಸಿತ ಪರಿಣಾಮ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

IMD Weather Forecast Heavy Rainfall Forecast In These States till October 28

ಬಂಗಾಳಕೊಲ್ಲಿಯಲ್ಲಿ ಅಕ್ಟೋಬರ್ 27ರ ವರೆಗೆ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಇದರಿಂದ ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 25ರಿಂದ 28ರ ವರೆಗೆ ತಮಿಳುನಾಡಿನ ಪುದುಚೇರಿ, ಆಂಧ್ರಪ್ರದೇಶದ ರಾಯಲಸೀಮಾ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈಗಾಗಲೇ ತಮಿಳುನಾರಿನ ಪುದುಚೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ವರದಿಯಾಗಿದೆ. ಭಾರೀ ಮಳೆಯಿಂದಾಗಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಉತ್ತರ ಮತ್ತು ಮಧ್ಯ ಪ್ರದೇಶಗಳ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ತಂಡಗಳನ್ನು ನೇಮಿಸಲಾಗಿದೆ.

ಅಕ್ಟೋಬರ್ 27ರಂದು ಪಶ್ಚಿಮ ಹಿಮಾಲಯ ಪ್ರದೇಶ, ಬಿಹಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ತಿಂಗಳ ಅಂತ್ಯದವರೆಗೂ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಅಕ್ಟೋಬರ್ 27, 28 ಮತ್ತು 29ರಂದು ಒಡಿಶಾ, ಕರಾವಳಿ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-60 ಕಿ.ಮೀ. ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 26ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ಮುಂದಿನ ವಾರ ಎಲ್ಲೆಲ್ಲಿ ಮಳೆ?: ಮುಂದಿನ ವಾರದ ಆರಂಭದಲ್ಲಿ ತಮಿಳುನಾಡು, ಕಾರೈಕಲ್ ಮತ್ತು ಪುದುಚೇರಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದೇ ವೇಳೆ ಗುಜರಾತ್, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣದ ಕರಾವಳಿ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿದಂತೆ ಸೂಚಿಸಿದೆ.

ಇದೀಗ ದೇಶದ ಬಹುತೇಕ ಭಾಗಗಳಲ್ಲಿ ಚಳಿ ಆವರಿಸಿದೆ. ಈ ನಡುವೆಯೇ ಚಂಡಮಾರುತ ಹಿನ್ನೆಲೆ ಭಾರೀ ಮಳೆಯಿಂದ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾದ ಘಟನೆಗಳು ಸಹ ನಡೆದಿವೆ. ಹಾಗೆಯೇ ಇದೀಗ ವಾಯುಭಾರ ಕುಸಿತ ಪರಿಣಾಮ ಮತ್ತೆ ಮಳೆರಾಯ ಹಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಆರ್ಭಟಿಸಲಿದ್ದಾನೆ ಎನ್ನುವ ಮುನ್ಸೂಚನೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+