IMD Weather Forecast: ಈ ಭಾಗಗಳಲ್ಲಿ 3 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಇದೀಗ ರಣಭೀಕರ ಬಿಸಿಲು ಮುಂದುವರೆದಿದೆ. ಈ ನಡುವೆಯೂ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್‌ 29ರ ವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಇದೀಗ ದೇಶಾದ್ಯಂತ ಹವಾಮಾನದಲ್ಲಿ ದೊಡ್ಡ ಮಟ್ಟದಲ್ಲಿ ಬದಲಾವಣೆಗಳು ಆಗುತ್ತಿವೆ. ಮುಂದಿನ ಕೆಲವು ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾದರೆ, ಇನ್ನು ಕೆಲವು ರಾಜ್ಯಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶದ ವಾತಾವರಣ ಇರಲಿದೆ ಎಂದು ತಿಳಿಸಿದೆ.

IMD Weather Forecast Heavy Rainfall Forecast Till March 29 in These states

ಎಲ್ಲೆಲ್ಲಿ ಮಳೆ?: ಇಂದು (ಮಾರ್ಚ್‌ 26) ಕೆಲವೇ ಕ್ಷಣಗಳಲ್ಲಿ ಹಿಮಾಚಲ ಪ್ರದೇಶ, ಜಮ್ಮು, ಲಡಾಖ್‌ನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 26ರಿಂದ 28 ರವರೆಗೆ ಪಂಜಾಬ್ ಮತ್ತು ಉತ್ತರಾಖಂಡ, ಮಾರ್ಚ್ 28 ಮತ್ತು 29ರಂದು ಅರುಣಾಚಲ ಪ್ರದೇಶ, ಮಾರ್ಚ್‌ 26 ರಂದು ಕೇರಳ ಮತ್ತು ಕರ್ನಾಟಕ ಸೇರಿದಂತೆ ಹಲವು ದಕ್ಷಿಣ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ತಾಪಮಾನ ಏರಿಕೆ?: ಮಾರ್ಚ್ 27ರಿಂದ 29ರ ವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ತಾಪಾಮದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಮಾರ್ಚ್ 29ರಿಂದ ಏಪ್ರಿಲ್ 1ರ ವರೆಗೆ ಒಡಿಶಾದ ಒಳಭಾಗಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ 2 ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 2-3°Cನಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅಲ್ಲದೆ, ಮುಂದಿನ 4-5 ದಿನಗಳಲ್ಲಿ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಕ್ರಮೇಣ 4-6°C ಮತ್ತು ಮಹಾರಾಷ್ಟ್ರದ ಒಳನಾಡಿನಲ್ಲಿ 2-3°Cನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಕ್ರಮೇಣ 2-3°Cನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮುಂದಿನ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಗರಿಷ್ಠ ತಾಪಮಾನದಲ್ಲಿ ಕ್ರಮೇಣ 2-3°Cನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿಯ ಹವಾಮಾನ ಮುನ್ಸೂಚನೆ: ದೆಹಲಿಯಲ್ಲಿ ಇಂದು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಡಿಗ್ರಿ ಮತ್ತು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಶಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿ-ಎನ್‌ಸಿಆರ್‌ನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗಿ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇಂದು (ಮಾರ್ಚ್‌ 26) ತಾಪಮಾದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನು ಈ ವರ್ಷ ಮಾರ್ಚ್ ತಿಂಗಳಲ್ಲಿ ದಾಖಲಾದ ಅತ್ಯಧಿಕ ತಾಪಮಾನ ಇದಾಗಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+