IMD Weather Forecast: ಚಂಡಮಾರುತದ ಪರಿಣಾಮ ಮೇ 26ರ ವರೆಗೂ ರಣಮಳೆ ಮುನ್ಸೂಚನೆ

IMD Weather Forecast: ಇಷ್ಟು ದಿನ ದೇಶದ ಬಹುತೇಕ ಭಾಗಗಳಲ್ಲಿ ರಣಬಿಸಿಲು ಮುಂದುವರೆದಿತ್ತು. ಈ ನಡುವೆಯೇ 'ಸೈಕ್ಲೋನ್ ಶಕ್ತಿ' ಪರಿಣಾಮ ಹಲವೆಡೆ ಪ್ರವಾಹದಂತಹ ಮಳೆಯಾಗುತ್ತಿದೆ. ಹಾಗೆಯೇ ಈ ಭಾಗಗಳಲ್ಲಿ ಮೇ 26ರ ವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತ ಹವಾಮಾನ ಇಲಾಖೆ ಪ್ರಕಾರ, ಅವಧಿಗೂ ಮುನ್ನ ಅಂದರೆ, ಮೇ 14ರಿಂದ ಅಧಿಕೃತವಾಗಿ ನೈಋತ್ಯ ಮಾನ್ಸೂನ್ ಆರಂಭವಾಗಿದೆ. ಮತ್ತೊಂದೆಡೆ ಅಂಡಮಾನ್, ನಿಕೋಬಾರ್‌ ಹಾಗೂ ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಉಂಟಾಗಿದ್ದು, ಪರಿಣಾಮ ದೇಶದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಪ್ರವಾಹದಂತಹ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೀಡಿದೆ.

IMD Weather Forecast Heavy Rainfall Forecast till May 26 Due to Cyclone shakti Effect

ಹವಾಮಾನ ಇಲಾಖೆ ತಜ್ಞರು ಚಂಡಮಾರುತದ ಅಲೆಗಳು ತೀವ್ರಗೊಂಡು ಕರ್ನಾಟ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಮೇ 16ರಿಂದ 26ರ ವರೆಗೂ ಈ ಚಂಡಮಾರುತದ ಪ್ರಭಾವ ಇರಲಿದ ಎಂದು ಮುನ್ನೆಚ್ಚರಿಕೆಯನ್ನು ಸಹ ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಈ ಚಂಡಮಾರುತ ತೀವ್ರಗೊಂಡರೆ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶ ರವಾನಿಸಿದೆ. ಮೇ 26ರ ವರೆಗೂ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳ ಮೇಲೆ ಇದು ಹೆಚ್ಚಾಗಿ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಯೆಲ್ಲೋ ಅಲರ್ಟ್ ಘೋಷಣೆ: ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ, ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮೇ 16ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ತುಮಕೂರು, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆ, ಮಧ್ಯ ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಹಲವು ಭಾಗಗಳಲ್ಲಿ ಮುಂದಿನ 5 ದಿನ ರಣಮಳೆ ಸುರಿಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶ ನೀಡಿದೆ.

ಇಂದು ಎಲ್ಲೆಲ್ಲಿ ಮಳೆ?: ಇಂದು (ಮೇ 14) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶ, ಕರಾವಳಿ ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ಜೊತೆಗೆ ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವೇ ದಿನಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದ ಅಂತಲೂ ಈಗಾಗಲೇ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+