IMD Weather Forecast: ಈ ಭಾಗಗಳಲ್ಲಿ ಅಕ್ಟೋಬರ್ 14ರ ವರೆಗೂ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಚಂಡಮಾರುತದ ಪರಿಣಾಮ ಈ ಭಾಗಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು, ಮಿಂಚು ಸಹಿತ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ಚಂಡಮಾರುತ ಹಿನ್ನೆಲೆ ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ.

IMD Weather Forecast Heavy Rainfall Forecast till October 14 Due to Cyclone shakti Effect

ಇಂದು (ಅಕ್ಟೋಬರ್ 10) ಇನ್ನೂ ಕೆಲವೇ ಕ್ಷಣಗಳಲ್ಲಿ ಶುಕ್ರವಾರ ಉತ್ತರ, ಮಧ್ಯ ಭಾರತ ಹಾಗೂ ದಕ್ಷಿಣ ಭಾರತದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಈಶಾನ್ಯ ಮತ್ತು ದಕ್ಷಿಣ ಭಾರತದ ರಾಜ್ಯಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೂಡ ನೀಡಿದೆ.

ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಪಶ್ಚಿಮ ಬಂಗಾಳ, ಲಕ್ಷದ್ವೀಪ ಮತ್ತು ತೆಲಂಗಾಣದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಅಲ್ಲದೆ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಮತ್ತು ಉತ್ತರ ಪ್ರದೇಶ ಭಾಗಗಳಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದೆ. ಆದರೆ, ಚಂಡಮಾರುತ ಪರಿಣಾಮ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅದರಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಜರಾತ್‌ನ ವೆರಾವಲ್, ಭರೂಚ್, ಮಧ್ಯಪ್ರದೇಶದ ಉಜ್ಜಯಿನಿ, ಉತ್ತರ ಪ್ರದೇಶದ ಶಹಜಹಾನ್‌ಪುರ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನೂ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಾವುದೇ ಮಳೆಯ ವಾತಾವರಣ ಇಲ್ಲ ಎಂದು ತಿಳಿಸಿದೆ.

ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಕರಾವಳಿ ಕರ್ನಾಟಕ, ಕರ್ನಾಟಕ ದಕ್ಷಿಣ ಒಳನಾಡು, ಆಂಧ್ರ ಪ್ರದೇಶದ ಕರಾವಳಿ, ಯಾನಂ ಮತ್ತು ರಾಯಲಸೀಮಾದಲ್ಲಿ ಅಕ್ಟೋಬರ್ 14ರ ವರೆಗೂ ಭಾರೀ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 12ರ ವರೆಗೆ ಒಡಿಶಾದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಈಶಾನ್ಯ ಭಾರತದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+