IMD Weather Forecast: ಚಂಡಮಾರುತದ ಪರಿಣಾಮ ಈ ಭಾಗಗಳಲ್ಲಿ ಅಕ್ಟೋಬರ್ 7ರ ವರೆಗೂ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಮುಂದುವರೆದಿದೆ. ಹಾಗೆಯೇ ಇದೀಗ ಅರಬ್ಬೀ ಸಮುದ್ರದಲ್ಲಿ ಶಕ್ತಿ ಚಂಡಮಾರುತ ರೂಪುಗೊಂಡ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಹಲವು ಭಾಗಗಳಲ್ಲಿ ಗುಡುಗು ಸಹಿತ ರಣಭೀಕರ ಮಳೆಯಾಗುವ ಸಾಧ್ಯತೆಯಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ರೂಪಗೊಂಡ ಪರಿಣಾಮ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 7ರ ವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

IMD Weather Forecast Heavy Rainfall Forecast till October 7 Due to Cyclone shakti Effect

ಅಕ್ಟೋಬರ್ 7ರವರೆಗೆ ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಮಹಾರಾಷ್ಟ್ರ ಕರಾವಳಿಯಲ್ಲಿ ಈಗಾಗಲೇ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದು ಗಂಟೆಗೆ 65 ಕಿ.ಮೀ ದಾಟಿದಾರೂ ಆಶ್ಚರ್ಯವಿಲ್ಲ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಮಹಾರಾಷ್ಟ್ರದ ಉತ್ತರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಜೊತೆಗೆ ಕರಾವಳಿ ನಿವಾಸಿಗಳಿಗೆ, ವಿಶೇಷವಾಗಿ ತಗ್ಗು ಪ್ರದೇಶಗಳಲ್ಲಿ ವಾಸ ಆಗಿರುವ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಪೂರ್ವ ವಿದರ್ಭ ಮತ್ತು ಮರಾಠವಾಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕೊಂಕಣದಲ್ಲಿ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮಳೆಯಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಬಹುದು. ಜನಜೀವನ ಅಸ್ತವ್ಯಸ್ತವಾಗಬಹುದು ಮತ್ತು ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಸರ್ಕಾರದ ಸೂಚನೆ ಏನು?: ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತುರ್ತು ಪರಿಸ್ಥಿತಿಗಳಿಗೆ ಸಂಪೂರ್ಣವಾಗಿ ಸಿದ್ಧರಾಗಿರುವಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ. ಈಗಾಗಲೇ ವಿಪತ್ತು ನಿರ್ವಹಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ. ತಗ್ಗುಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಆಶ್ರಯಗಳನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಪೊಲೀಸ್, ಅಗ್ನಿಶಾಮಕ ದಳಗಳು ಮತ್ತು ಎನ್‌ಡಿಆರ್‌ಎಫ್‌ನೊಂದಿಗೆ ಸತತ ಸಂಪರ್ಕ ಸಾಧಿಸಲಾಗಿದೆ. ವೈದ್ಯಕೀಯ ಸೌಲಭ್ಯಗಳನ್ನು ಸಹ ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಈಗಾಗಲೇ ಸಮುದ್ರಕ್ಕೆ ಇಳಿದಿರುವ ದೋಣಿಗಳು ತಕ್ಷಣವೇ ಹಿಂತಿರುಗಬೇಕು ಎಂದು ಸೂಚನೆ ನೀಡಿದೆ. ಕರಾವಳಿ ಭಾಗದ ಜನರಿಗೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಲು, ಭಾರೀ ಮಳೆಯ ಸಮಯದಲ್ಲಿ ಅನಗತ್ಯ ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಅಧಿಕೃತ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಅಂತಲೂ ಸೂಚನೆ ನೀಡಲಾಗಿದೆ.

ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಶಕ್ತಿ ಚಂಡಮಾರುತ ಪರಿಣಾಮ ಬೀರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ವಾಹನ ಸಂಚಾರಕ್ಕೆ ಅಡ್ಡಿಪಡಿಸಬಹುದು. ಆದ್ದರಿಂದ ಜನರು ಪ್ರಯಾಣವನ್ನು ಎಚ್ಚರಿಕೆಯಿಂದ ಯೋಜಿಸಬೇಕು. ಇನ್ನು ಪ್ರವಾಹ ನಿರ್ಮಾಣವಾಗುವ ಮಾರ್ಗಗಳ ರಸ್ತೆಗಳನ್ನು ಮುಚ್ಚಬೇಕು ಎಂದು ಮುಂಜಾಗ್ರತಾ ಕ್ರಮವಾಗಿ ತಿಳಿಸಲಾಗಿದೆ.

ಮುಂದಿನ ದಿನಗಳಲ್ಲಿ ಚಂಡಮಾರುತ ತೀವ್ರಗೊಳ್ಳಲಿದ್ದು, ಭಾರೀ ಮಳೆ, ಬಲವಾದ ಗಾಳಿ ಬೀಸುವ ಮುನ್ಸೂಚನೆ ಇದೆ. ಆದ್ದರಿಂದ ನಾಗರಿಕರು ಎಚ್ಚರಿಕೆಯಿಂದ ಇರಬೇಕು. ಅಲ್ಲದೆ, ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಿದ್ಧರಾಗಿರುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+