IMD Weather Forecast: ದೇಶದ ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

IMD Weather Forecast: ಈಗಾಗಲೇ ಕೇರಳದ ನಂತರ ಮುಂಗಾರು ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಿಗೆ ಎಂಟ್ರಿ ಕೊಟ್ಟಿದೆ. ಇದೀಗ ಈ ಪ್ರದೇಶಗಳಲ್ಲಿ ಭಾನುವಾರ (ಜೂನ್ 14) ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದೇಶದ ಒಟ್ಟು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿಂದು (ಜೂನ್ 14) ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ ಉತ್ತರ, ಪೂರ್ವ, ಈಶಾನ್ಯ ಹಾಗೂ ದಕ್ಷಿಣ ಭಾಗಗಳ ಹಲವೆಡೆ ಭಾರೀ ಮಳೆ ಸುರಿಯಲಿದ್ದು, ಗಂಟೆಗೆ 80-90 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

IMD Weather Forecast IMD Warns Heavy Rain Thunderstorms in These States of India on June 14

ಎಲ್ಲೆಲ್ಲಿ ಸುರಿಯಲಿದೆ ಮಳೆ?

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ, ಪಂಜಾಬ್, ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲೂ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದ ಎಂದು ಐಎಂಡಿ ಎಚ್ಚರಿ ನೀಡಿದೆ.

ಜನರಿಗೆ ಅಧಿಕಾರಿಗಳಿಂದ ಮಹತ್ವದ ಸಲಹೆ

ಅಲ್ಲದೆ ಇದೇ ವೇಳೆ ಈಶಾನ್ಯ ಭಾರತದ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾ, ದಕ್ಷಿಣ ಭಾರತದ ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲೂ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಮಳೆ ಜೊತೆ ಜೋರಾದ ಗಾಳಿ ಬೀಸಲಿದ್ದು, ಮರಗಳು ಧರೆಗುರುಳುವ, ಮೂಲಸೌಕರ್ಯಗಳಿಗೆ ಹಾನಿಯಾಗುವ ಹಾಗೂ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಒಳಿತು ಎಂದು ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಲಹೆ ನೀಡಿದ್ದಾರೆ.

ದೇಶದ ಪ್ರಮುಖ ನಗರಗಳ ತಾಪಮಾನದ ವಿವರ

ದೇಶದ ಪ್ರಮುಖ ನಗರಗಳಲ್ಲಿ ದಾಖಲಾಗುವ ತಪಾಮನಾದ ವಿವರವನ್ನು ಇಲ್ಲಿ ನೀಡಲಾಗಿದೆ. ಮುಂಬೈನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಹೈದರಾಬಾದ್ 27 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು 22°C, ಚೆನ್ನೈ 30°C, ಅಹಮದಾಬಾದ್ 30°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 16 ಮತ್ತು 17ರಂದು ಭಾರಿ ಮಳೆ

ಈ ನಡುವೆ ಉಪ-ಹಿಮಾಲಯ ಪಶ್ಚಿಮ ಬಂಗಾಳದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಮುಂದಿನ ಒಂದು ವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 16 ಮತ್ತು 17ರಂದು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್, ಕಾಲಿಂಪಾಂಗ್, ಜಲ್ಪೈಗುರಿ, ಅಲಿಪುರ್ದುವಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಗುಡುಗು-ಸಿಡಿಲಿನ ಸಮಯದಲ್ಲಿ ಜನರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸಾಧ್ಯವಾದಷ್ಟು ಮನೆಯೊಳಗೆ ಇರುವುದು ಉತ್ತಮ. ಜೊತೆಗೆ ಹವಾಮಾನ ಪರಿಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಹಾಗೂ ಮುನ್ಸೂಚನೆಗಳನ್ನು ಗಮನಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+