Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ

Imd Weather Forecast: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಾಯುವ್ಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಗಳಲ್ಲಿ ಆಗಸ್ಟ್‌ 23 ರಂದು ಕಡಿಮೆ ಒತ್ತಡದ ಪ್ರದೇಶವು ಅದೇ ಪ್ರದೇಶದಲ್ಲಿ ಮುಂದುವರೆದಿದೆ. ಸಂಬಂಧಿತ ಆವರ್ತಮಾರುತ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದ್ದು, ಎತ್ತರದೊಂದಿಗೆ ನೈಋತ್ಯಕ್ಕೆ ಓರೆಯಾಗಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್ ಈಗ ಅಮೃತಸರ, ಪಟಿಯಾಲ, ಮೊರಾದಾಬಾದ್, ಲಕ್ಟೋ, ಡೆಹಿ, ಪುರುಲಿಯಾ ಮೂಲಕ ಹಾದು ಹೋಗುತ್ತದೆ.

ವಾಯುವ್ಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಗಳಲ್ಲಿ ಕಡಿಮೆ ಒತ್ತಡದ ಪ್ರದೇಶದ ಕೇಂದ್ರವಾಗಿದೆ ಮತ್ತು ಅಲ್ಲಿಂದ ಆಗ್ನೇಯಕ್ಕೆ ಬಂಗಾಳ ಕೊಲ್ಲಿ ಪೂರ್ವಮಧ್ಯಕ್ಕೆ ಹೋಗುತ್ತದೆ. ಉತ್ತರ ಕೇರಳ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದಲ್ಲಿ ಮೇಲ್ಬಾಗದ ವಾಯುವ್ಯ ಆವರ್ತಮಾರುತದ ಪರಿಚಲನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Imd Weather Forecast

ಭಾರತದ ಮಾನ್ಸೂನ್ ಋತುವಿನ ಅತ್ಯಂತ ಪ್ರಬಲವಾಗಿರುವಾಗಲೇ ದುರ್ಬಲಗೊಳ್ಳುತ್ತಿದೆ. ಮುಂದಿನ ಎರಡು ವಾರಗಳವರೆಗೆ ಅಂದರೆ ಸೆಪ್ಟೆಂಬರ್ 2 ರವರೆಗೆ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಶನಿವಾರದ ವೇಳೆಗೆ ದೀರ್ಘಾವಧಿಯ ಸರಾಸರಿಗಿಂತ ಈಗಾಗಲೇ ಶೇ. 14 ರಷ್ಟು ಕಡಿಮೆ ಮಳೆ ಕೊರತೆ ಇದೆ. ಇದೀಗ ಮಾನ್ಸೂನ್ ಮಧ್ಯ ಭಾರತದಾದ್ಯಂತ ವ್ಯಾಪಿಸುವ ಬದಲು ಹಿಮಾಲಯದ ತಪ್ಪಲಿನಲ್ಲಿಯೇ ಇರುವುದರಿಂದ ಮತ್ತಷ್ಟು ಹೆಚ್ಚಾಗಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಮಳೆ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮಧ್ಯ ಮತ್ತು ಪೂರ್ವ ಪ್ರದೇಶಗಳು ಹಾಗೂ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಮಧ್ಯ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮೋಡ ಕವಿದ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಮಳೆ ಇರಲಿದೆ ಎಂದೂ ಐಎಂಡಿ ತಿಳಿಸಿದೆ. ಭಾನುವಾರ ದೆಹಲಿ ಸೇರಿದಂತೆ ಹಲವಾರು ಭಾಗಗಳಲ್ಲಿ ಹಗುರ ಮಳೆಯಾಗಿದೆ. ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ ಬಂಗಾಳ, ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶದ ಕರಾವಳಿಯಲ್ಲಿ ಆಗಸ್ಟ್ 24 ರವರೆಗೆ ಹವಾಮಾನದಲ್ಲಿ ಭಾರೀ ವ್ಯತ್ಯಾಸ ಇರಲಿದೆ. ಇದೇ ಸಂದರ್ಭದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ. ಇರಲಿದ್ದು, ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

Imd Weather Forecast: ಈ ಪ್ರದೇಶಗಳಲ್ಲಿ ಬಿರುಗಾಳಿ

ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ರಾಷ್ಟ್ರ ರಾಜಧಾನಿಯ ದೆಹಲಿ ಸೇರಿದಂತೆ ಪ್ರತ್ಯೇಕ ಪ್ರದೇಶಗಳಲ್ಲಿ ಹಗುರ ಮಳೆ ಆಗಿದೆ. ತಾಪಮಾನವು ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 33 ರಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಧ್ಯಪ್ರದೇಶ ಮತ್ತು ವಿದರ್ಭದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಾಗೂ ಛತ್ತೀಸ್‌ಗಢದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಭಾರತದಲ್ಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಕೊಂಕಣ ಮತ್ತು ಗೋವಾ ಸೇರಿದಂತೆ ವಿವಿಧೆಡೆ ಮೂರರಿಂದ ನಾಲ್ಕು ದಿನ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ತೆರಳದಂತೆ ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

Imd Weather Forecast: ದಕ್ಷಿಣ ಭಾರತದ ವಿವಿಧ ಭಾಗಗಳಲ್ಲೂ ಮಳೆ

ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+