Imd Weather Forecast: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ: ಈ ಭಾಗಗಳಲ್ಲಿ ಮುಂದಿನ 5 ದಿನ ಭಾರೀ ಮಳೆ: ಐಎಂಡಿ

Imd Weather Forecast: ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲೂ ಮುಂದಿನ ಒಂದು ವಾರದ ಅವಧಿಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳದ ಗಂಗಾನದಿ ಮತ್ತು ಜಾರ್ಖಂಡ್ ಮತ್ತು ಉತ್ತರ ಒಡಿಶಾದ ಪಕ್ಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶವು ಆಗಸ್ಟ್‌ 25ರ ಮಂಗಳವಾರ ಜಾರ್ಖಂಡ್ ಮತ್ತು ನೆರೆಹೊರೆ ಮೇಲೆ ನೆಲೆಸಿದೆ. ಸಂಬಂಧಿತ ಸುಳಿಗಾಳಿಯು ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ವರೆಗೆ ವಿಸ್ತರಿಸಿದ್ದು, ಎತ್ತರದೊಂದಿಗೆ ದಕ್ಷಿಣಕ್ಕೆ ಓರೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಈ ವ್ಯವಸ್ಥೆಯು ಜಾರ್ಖಂಡ್‌ನಾದ್ಯಂತ ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

Imd Weather Forecast

ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಟ್ರಫ್ ಈಗ ಜಮ್ಮು, ಡೆಹ್ರಾಡೂನ್, ಶಹಜಹಾನ್‌ಪುರ, ವಾರಣಾಸಿ ಮೂಲಕ ಹಾದುಹೋಗುತ್ತದೆ. ಜಾರ್ಖಂಡ್ ಮತ್ತು ನೆರೆಹೊರೆ ಮತ್ತು ದಿಘಾದ ಮೇಲೆ ಕಡಿಮೆ ಒತ್ತಡದ ಪ್ರದೇಶದ ಕೇಂದ್ರವಾಗಿದೆ ಮತ್ತು ಅಲ್ಲಿಂದ ಆಗ್ನೇಯಕ್ಕೆ ಬಂಗಾಳಕೊಲ್ಲಿಯ ವಾಯುವ್ಯಕ್ಕೆ ವಿಸ್ತರಿಸುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀ ವರೆಗೆ ವಿಸ್ತರಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ಬಿಹಾರ ಮತ್ತು ಉತ್ತರ ಪ್ರದೇಶ ಸೇರಿದಂತೆ ಪೂರ್ವ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಧ್ಯ ಭಾರತ, ಪೂರ್ವ ಭಾರತ (ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ) ಮತ್ತು ಪೂರ್ವ ಕರಾವಳಿಯುದ್ದಕ್ಕೂ ಭಾರೀ ಮಳೆ ಇರಲಿದೆ. ಜಾರ್ಖಂಡ್, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಅಥವಾ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ಮೂರರಿಂದ ನಾಲ್ಕು ದಿನಗಳ ಅವಧಿಗೆ ಮಳೆ ಇರಲಿದೆ. ಆಗಸ್ಟ್ 27 ರಿಂದ 31ರ ನಡುವೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಇರಲಿದೆ.

Imd Weather Forecast: ದಕ್ಷಿಣ ಭಾರತದ ವಿವಿಧ ಭಾಗಗಳಲ್ಲೂ ಮಳೆ

ಇನ್ನು ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲೂ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್‌ 31ರ ವರೆಗೆ ಮಳೆ ಇರಲಿದೆ.

Imd Weather Forecast: ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮೀನುಗಾರರಿಗೆ ಎಚ್ಚರಿಕೆ ಕೊಡಲಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಗಂಟೆಗೆ 35ರಿಂದ 45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಿರುಗಾಳಿಯೂ ಬೀಸುವ ಸಾಧ್ಯತೆ ಇದೆ. ಆಗಸ್ಟ್‌ 25ರಿಂದ 26ರ ವರೆಗೆ ಕರ್ನಾಟಕದ ಕರಾವಳಿ ಹಾಗೂ ಕರಾವಳಿಯುದ್ದಕ್ಕೂ ಭಾರೀ ಗಾಳಿ ಬೀಸಲಿದೆ. ಹೀಗಾಗಿ, ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಳಿದಂತೆ ಕರ್ನಾಟಕದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+