IMD Weather Forecast: ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ
ಪಶ್ವಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೈಋತ್ಯ ಮುಂಗಾರು ಹಿಮ್ಮೆಟ್ಟುವಿಕೆಯು 32.5°N/72.5°E, ಗುರುದಾಸ್‌ಪುರ, ಚಂಡೀಗಢ, ಮುಜಾಫರ್‌ನಗರ, ಅಲಿಗಢ, ಧೋಲ್‌ಪುರ, ಉದಯಪುರ, ಡೀಸಾ, ನಲಿಯಾ ಮತ್ತು 23.0°N/67.8°E ಮೂಲಕ ಹಾದು ಹೋಗುವುದನ್ನು ಮುಂದುವರಿಸಿದೆ.
ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 1.5 ರಿಂದ 4.5 ಕಿ.ಮೀ ಎತ್ತರದವರೆಗೆ ವಾಯುಭಾರ ಕುಸಿತದ ಸುಳಿಗಾಳಿ (cyclonic circulation) ಮುಂದುವರಿದಿದೆ. ಉತ್ತರ ತಮಿಳುನಾಡು ಮತ್ತು ಅದನ್ನು ಹೊಂದಿಕೊಂಡಿರುವ ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಮೇಲೆ ವಾಯುಭಾರ ಕುಸಿತದ ಸುಳಿಗಾಳಿ ಉಂಟಾಗಿದ್ದು, ಇದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ.

ದಕ್ಷಿಣ ತೆಲಂಗಾಣದಿಂದ ರಾಯಲಸೀಮೆ ಮೂಲಕ ಮನ್ನಾರ್ ಕೊಲ್ಲಿಯವರೆಗೆ ಉತ್ತರ-ದಕ್ಷಿಣ ದಿಕ್ಕಿನ ಟ್ರಫ್ (ಕಡಿಮೆ ಒತ್ತಡದ ಪಟ್ಟಿ) ಹಾದುಹೋಗುತ್ತಿದೆ; ಇದರೊಂದಿಗೆ ಉತ್ತರ ತಮಿಳುನಾಡು ಮತ್ತು ಅದನ್ನು ಹೊಂದಿಕೊಂಡಿರುವ ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತದ ಸುಳಿಗಾಳಿ ಇದೆ. ಉತ್ತರ ಒಳನಾಡು ಕರ್ನಾಟಕದಿಂದ ದಕ್ಷಿಣ ಒಳನಾಡು ಕರ್ನಾಟಕದ ಮೂಲಕ ತಮಿಳುನಾಡಿನವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವ್ಯಾಪಿಸಿದ್ದ ಟ್ರಫ್ ಮೇಲೆ ತಿಳಿಸಲಾದ ವ್ಯವಸ್ಥೆಯೊಂದಿಗೆ ವಿಲೀನಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 30ರ ಬುಧವಾರ ಭಾರತದಾದ್ಯಂತ ಮಿಶ್ರ ಹವಾಮಾನ ಇರಲಿದೆ. ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾದರೆ ಇನ್ನೂ ಕೆಲವರು ಪ್ರದೇಶಗಳಲ್ಲಿ ಬಿಸಿಲು ಇರಲಿದೆ. ದಕ್ಷಿಣ, ಈಶಾನ್ಯ ಮತ್ತು ಪೂರ್ವದ ಕೆಲವು ಭಾಗಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗಲಿದೆ. ಆದರೆ ವಾಯುವ್ಯ ಭಾರತದ ಹೆಚ್ಚಿನ ಪ್ರದೇಶಗಳಲ್ಲಿ ಒಣಹವೆ ಇರಲಿದೆ. ಸೆಪ್ಟೆಂಬರ್ 30ರಂದು ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ದ್ವೀಪದ ಹಲವಾರು ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ, ದೆಹಲಿ-ಎನ್‌ಸಿಆರ್ ಮತ್ತು ವಾಯುವ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ.
ಕರ್ನಾಟಕವೂ ಸೇರಿ ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ
ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ, ಕರ್ನಾಟಕದ ಕೆಲವು ಭಾಗಗಳು ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿಯೂ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಈ ಸಂದರ್ಭದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಬಹುದು. ಕೇರಳದಲ್ಲಿಯೂ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶ ಮತ್ತು ಕರ್ನಾಟಕದ ಒಳನಾಡಿನ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕೊಟ್ಟಿದೆ.
ಅಕ್ಟೋಬರ್ 1 ರಿಂದ 5 ರವರೆಗೆ ಕೇರಳದಲ್ಲಿ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಕರಾವಳಿ ಕರ್ನಾಟಕದಲ್ಲಿ ಅಕ್ಟೋಬರ್ ಮೊದಲ ಎರಡು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.


Click it and Unblock the Notifications
