Imd Weather Forecast: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪ್ರಸರಣ: ದಕ್ಷಿಣ ಭಾರತ ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ

Imd Weather Forecast: ಕರ್ನಾಟಕವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರು ದಿನಗಳ ವರೆಗೆ ಭಾರತದ ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಈಶಾನ್ಯ ಮಧ್ಯಪ್ರದೇಶ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಕಡಿಮೆ ಒತ್ತಡದ ಪ್ರದೇಶವು ಆಗಸ್ಟ್‌ 26ರಂದು ದಕ್ಷಿಣ ಉತ್ತರ ಪ್ರದೇಶ ಮತ್ತು ಪಕ್ಕದ ಈಶಾನ್ಯ ಮಧ್ಯಪ್ರದೇಶದಲ್ಲಿ ಇದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು ಈಗ ಸರಾಸರಿ ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀ ವರೆಗೆ ವಿಸ್ತರಿಸಿದೆ. ಸರಾಸರಿ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ತಗ್ಗು ಈಗ ಜಮ್ಮು, ಡೆಹ್ರಾಡೂನ್, ಶಹಜಹಾನ್‌ಪುರ, ದಕ್ಷಿಣ ಉತ್ತರ ಪ್ರದೇಶ ಮತ್ತು ಪಕ್ಕದ ಈಶಾನ್ಯ ಮಧ್ಯಪ್ರದೇಶ, ರಾಂಚಿ, ದಿಘಾ ಮತ್ತು ಅಲ್ಲಿಂದ ಆಗೇಯಕ್ಕೆ ಬಂಗಾಳದ ಈಶಾನ್ಯ ಕೊಲ್ಲಿಗೆ ಹಾದುಹೋಗುತ್ತದೆ. ಪಶ್ಚಿಮ ಮಧ್ಯ - ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಉತ್ತರ ಆಂಧ್ರಪ್ರದೇಶ - ದಕ್ಷಿಣ ಒಡಿಶಾ ಕರಾವಳಿಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯುವ್ಯ ಚಂಡಮಾರುತದ ಪರಿಚಲನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Imd Weather Forecast

ಮುಂದಿನ ಎರಡು ದಿನ ಭಾರೀ ಮಳೆ ಇರಲಿದೆ. ದೆಹಲಿಯಲ್ಲಿ ಮಳೆ ಅಬ್ಬರ ಅಲ್ಪ ಕಡಿಮೆ ಆಗಿದೆ. ಆದರೆ ಮುಂಬೈ ಮತ್ತು ಮಧ್ಯ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು 25 ರಿಂದ 34 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ.

ಕಳೆದ 24 ಗಂಟೆಗಳಲ್ಲಿ ದೆಹಲಿಯಾದ್ಯಂತ ಭಾರೀ ಮಳೆಯಾಗಿದೆ. ಮುಂಬೈ ಮತ್ತು ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ ಮತ್ತು ಗೋವಾದಲ್ಲಿ ಮಳೆ ಇರಲಿದೆ. ಬೆಂಗಳೂರಿನಲ್ಲಿ ದಕ್ಷಿಣ ಒಳನಾಡಿನ ಕರ್ನಾಟಕದಾದ್ಯಂತ ಮಳೆ ಚಟುವಟಿಕೆ ದುರ್ಬಲಗೊಂಡಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ ಭಾಗಮಂಡಲ ಸೇರಿದಂತೆ ಕೊಡಗಿನ ಈ ಪ್ರದೇಶದಲ್ಲಿ 15 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ.

Imd Weather Forecast: ಉತ್ತರ ಭಾರತ - ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ

ಇನ್ನು ಮಧ್ಯ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಅತ್ಯಂತ ತೀವ್ರವಾದ ಮಳೆ ಆಗುವ ಸಾಧ್ಯತೆ ಇದೆ. ಪೂರ್ವ ಮತ್ತು ಪಶ್ಚಿಮ ಮಧ್ಯಪ್ರದೇಶ, ಛತ್ತೀಸ್‌ಗಢ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅಲ್ಲದೆ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲೂ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಅಲ್ಲದೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಇರಲಿದೆ. ಹೈದರಾಬಾದ್‌ನಲ್ಲಿ ಪ್ರತ್ಯೇಕವಾಗಿ ಮಳೆಯಾಗಲಿದ್ದು, ತೆಲಂಗಾಣದಾದ್ಯಂತ ಚದುರಿದ ಮಳೆಯಾಗುವ ಮುನ್ಸೂಚನೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+