ಬಿಸಿಗಾಳಿಗೆ ತತ್ತರಿಸಿದ ಜನರಿಗೆ ನೆಮ್ಮದಿ ಸುದ್ದಿ; ಮುಂಗಾರು ಮಳೆ ಎಂಟ್ರಿ ಬಗ್ಗೆ ಐಎಂಡಿ ಬಿಗ್‌ ಅಪ್ಡೇಟ್

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಬಿರುಬಿಸಿಲಿನ ವಾತಾವರಣ ಮುಂದುವರೆದಿದೆ. ಈ ನಡುವೆ ಮೇ ತಿಂಗಳಿನಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ನೈರುತ್ಯ ಮುಂಗಾರು ಯಾವಾಗ ಎಂಟ್ರಿ ಕೊಡಲಿದೆ ಎಂದು ಐಎಂಡಿ ಬಿಗ್ ಅಪ್ಡೇಟ್‌ ಕೊಟ್ಟಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಜಮ್ಮು ಮತ್ತು ಕಾಶ್ಮೀರ, ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳ ಅಲ್ಲಲ್ಲಿ ಅಕಾಲಿಕ ಮಳೆ ಮತ್ತು ಬಿಸಿಗಾಳಿಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

IMD Weather Forecast May 2026 Heatwave Alert Heavy Rain Warning and Monsoon Update Know details

ಬಿಸಿಗಾಳಿ ಪ್ರಮಾಣ ಹೆಚ್ಚಳ

ಮೇ ತಿಂಗಳಿನಲ್ಲಿ ದೇಶದ ಹಲವು ಭಾಗಗಳಲ್ಲಿ ವಿಶೇಷವಾಗಿ ಹಿಮಾಲಯ ಪ್ರದೇಶ, ಪೂರ್ವ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಗುಜರಾತ್, ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ತಾಪಮಾನದಲ್ಲಿ ಏರಿಕೆ

ದೇಶದ ಬಹುತೇಕ ಭಾಗಗಳಲ್ಲಿ ರಾತ್ರಿ ವೇಳೆ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ಆದರೆ ವಾಯುವ್ಯ ಭಾರತದ ರಾಜಸ್ಥಾನ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ನವದೆಹಲಿ ಹಾಗೂ ಮಧ್ಯ ಭಾರತದ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ರಾತ್ರಿಯ ವೇಳೆ ತಾಪಮಾನ ಸಾಮಾನ್ಯ ಮಟ್ಟದಲ್ಲಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನೈಋತ್ಯ ಮುಂಗಾರು ಎಂಟ್ರಿ ಯಾವಾಗ?

ಭಾರತದಾದ್ಯಂತ ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರ ಸಿಕ್ಕಿಂ ಹಾಗೂ ಪೂರ್ವ ಭಾರತದ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ಒಡಿಶಾದ ಕೆಲವು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಬಹುದು ಎಂದು ತಿಳಿಸಿದೆ.
ಮತ್ತೊಂದೆಡೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ನೈಋತ್ಯ ಮುಂಗಾರು ಮೇ 14 ರಿಂದ 16 ರ ಒಳಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಮುಂಗಾರು ಮೊದಲು ದೇಶದ ಕೇರಳಕ್ಕೆ ಪ್ರವೇಶಿಸಲಿದ್ದು, ಬಳಿಕ ದೇಶದ ಉಳಿದ ಭಾಗಗಳಿಗೆ ಎಂಟ್ರಿ ಕೊಡಿದೆ. ಈ ಕ್ಷಣಕ್ಕಾಗಿಯೇ ದೇಶದ ಬಹುತೇಕ ರಾಜ್ಯಗಳ ಜನರು ಕಾತರದಿಂದ ಕಾಯುತ್ತಿದ್ದಾರೆ.

ಇನ್ನೂ ಇದೀಗ ಸದ್ಯ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇದರಿಂದ ರಕ್ಷಿಸಿಕೊಳ್ಳಲು ಜನರು ಮಧ್ಯಾಹ್ನದ ವೇಳೆ ಹೊರಗಡೆ ಹೋಗುವುದನ್ನು ತಪ್ಪಿಸಬೇಕು ಮತ್ತು ಸಾಕಷ್ಟು ನೀರು ಕುಡಿಯುವಂತೆ ಮಹತ್ವದ ಸಲಹೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+