Imd Weather Forecast: ಕರ್ನಾಟಕ ಸೇರಿ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ಒಳನಾಡು ಕರ್ನಾಟಕದಿಂದ ಮಧ್ಯ ಮಹಾರಾಷ್ಟ್ರದ ಮೂಲಕ ದಕ್ಷಿಣ ಗುಜರಾತ್‌ವರೆಗೆ ವಿಸ್ತರಿಸಿರುವ ಮೇಲ್ಮ ಸುಳಿಗಾಳಿಯ ದ್ರೋಣಿ (trough) ಈಗ ಕಂಡುಬರುತ್ತಿದ್ದು, ಇದು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದುವರಿದು ನವೆಂಬರ್ 29, 2026 ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಮೇಲೆ ಸುಳಿಗಾಳಿಯೊಂದು (upper air cyclonic circulation) ಉಂಟಾಗುವ ಸಾಧ್ಯತೆಯಿದೆ. ಲಕ್ಷದ್ವೀಪದ ದಕ್ಷಿಣ ಭಾಗಗಳಿಂದ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೂಲಕ ಕರಾವಳಿ ಕರ್ನಾಟಕದವರೆಗೆ ವಿಸ್ತರಿಸಿದ್ದ, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗಿನ ಪೂರ್ವ ದಿಕ್ಕಿನ ಗಾಳಿಯ ದ್ರೋಣಿಯು (trough in easterlies) ಈಗ ದುರ್ಬಲಗೊಂಡಿದೆ ಎಂದು ಐಎಂಡಿ ತಿಳಿಸಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ
ದಕ್ಷಿಣ ಭಾರತದ ತಮಿಳುನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ತಮಿಳುನಾಡಿನ 23 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆರ್ಭಟ ಮುಂದುವರಿಯಲಿದೆ. ಲಕ್ಷ ದ್ವೀಪದ ದಕ್ಷಿಣ ಭಾಗಗಳಿಂದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಕರ್ನಾಟಕ ಕರಾವಳಿಯವರೆಗೆ ವಿಸ್ತರಿಸಿರುವ ಒಂದು ಟ್ರಫ್ ಪ್ರದೇಶವು ಸರಾಸರಿ ಸಮುದ್ರ ಮಟ್ಟದಿಂದ ಸುಮಾರು 1.5 ಕಿ.ಮೀ ಎತ್ತರದಲ್ಲಿ ಮುಂದುವರೆದಿದೆ.
ಇದರ ಪ್ರಭಾವದಡಿಯಲ್ಲಿ, ನೀಲಗಿರಿ, ಕೊಯಮತ್ತೂರು, ತೆಂಕಸಿ, ತೂತುಕುಡಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ ಗುಡುಗು ಸಹಿತ ಮಳೆ ಮುಂದುವರಿದಿದೆ. ಅಲ್ಲದೆ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.
ತಿರುಪ್ಪೂರು, ಈರೋಡ್, ಕಡಲೂರು, ತಿರುಚಿರಾಪಳ್ಳಿ, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಪುದುಕೊಟ್ಟೈ, ಶಿವಗಂಗಾ, ರಾಮನಾಥಪುರಂ, ದಿಂಡಿಗಲ್, ಮಧುರೈ, ವಿರುಧುನಗರ ಮತ್ತು ಥೇಣಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮತ್ತು ಕಾರೈಕಲ್ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಇರಲಿದೆ. ತಮಿಳುನಾಡು ಮತ್ತು ಪುದುಚೇರಿಯ ಉಳಿದ ಭಾಗಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಘಟ್ಟಗಳ ಉದ್ದಕ್ಕೂ ಮತ್ತು ದಕ್ಷಿಣ ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನವು ಶೂನ್ಯಕ್ಕಿಂತ ಕಡಿಮೆಯಾಗಿದೆ, ಇದರಿಂದಾಗಿ ಎತ್ತರದ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಲು ಪ್ರಾರಂಭಿಸಿವೆ. ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಮಿಂಚು ಗುಡುಗು ಸಹಿತ ಮಳೆ ಆಗಿದೆ. ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ ಮಂಜು ಕವಿದ ವಾತಾವರಣವಿರುತ್ತದೆ ಮತ್ತು ಹಗಲಿನಲ್ಲಿ ಹೆಚ್ಚಾಗಿ ಸ್ಪಷ್ಟ ಆಕಾಶವಿರುತ್ತದೆ.
ಪಂಜಾಬ್, ಹರಿಯಾಣ ಮತ್ತು ಚಂಡೀಗಢದಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ರಸ್ತೆ ಮತ್ತು ರೈಲು ಪ್ರಯಾಣಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ ಶೀತ ಅಲೆಯಂತಹ ವಾತಾವರಣ ಉಂಟಾಗಬಹುದು. ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ರಾಜಸ್ಥಾನ ಮತ್ತು ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಣನೀಯವಾಗಿ ಕಡಿಮೆಯಾಗಿದೆ.
ದಕ್ಷಿಣ ಭಾರತದಲ್ಲಿ ಭಾರೀ ಮಳೆ
ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ, ಕೇರಳ, ಮಾಹೆ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಭಾಗಗಳಲ್ಲಿ ಮಿಂಚು ಗುಡುಗು ಸಹಿತ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.





Click it and Unblock the Notifications
