IMD Weather Forecast: ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ; ಮುಂದಿನ 3 ಗಂಟೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
IMD Weather Forecast: ದಕ್ಷಿಣ ಭಾರತವೂ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಉತ್ತರ ತಮಿಳುನಾಡು ಮತ್ತು ಅದರ ಪಕ್ಕದಲ್ಲಿರುವ ದಕ್ಷಿಣ ಕರಾವಳಿ ಅಂಧ್ರಪ್ರದೇಶದ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 4.5 ರಿಂದ 5.8 ಕಿ.ಮೀ ಎತ್ತರದಲ್ಲಿ ಮೇಲೆ ಸುಳಿಗಾಳಿ (upper air cyclonic circulation) ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಲಕ್ಷದ್ವೀಪದ ಉತ್ತರ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದವರೆಗೆ ಮೇಲೆ ಸುಳಿಗಾಳಿ ಮುಂದುವರಿದಿದೆ. ಲಕ್ಷದ್ವೀಪದ ಉತ್ತರ ಭಾಗಗಳಲ್ಲಿರುವ ಮೇಲೆ ಸುಳಿಗಾಳಿಯಿಂದ ಕೇರಳ ಮತ್ತು ತಮಿಳುನಾಡಿನ ಮೂಲಕ ಬಂಗಾಳ ಕೊಲ್ಲಿಯ ನೈಋತ್ಯ ಭಾಗದವರೆಗೆ, ಸರಾಸರಿ ಸಮುದ್ರ ಮಟ್ಟದಿಂದ 1.5 ರಿಂದ 3.1 ಕಿ.ಮೀ ಎತ್ತರದಲ್ಲಿ ಒಂದು "ಟ್ರಫ್' ಹಾದುಹೋಗಿದೆ. ಕರ್ನಾಟಕ ಕರಾವಳಿಯ ಪಕ್ಕದಲ್ಲಿರುವ ಪೂರ್ವ-ಮಧ್ಯ ಅರಬ್ಬಿ ಸಮುದ್ರದಿಂದ ಕೊಮೊರಿನ್ ಪ್ರದೇಶದವರೆಗೆ, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಚಂಡ ಪ್ರಸರಣ ಪ್ರಭಾವ ಹಾದುಹೋಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ ಮೂರರಿಂದ ಐದು ದಿನಗಳ ಅವಧಿಯಲ್ಲಿ ದಕ್ಷಿಣ ಭಾರತದ ಹಲವಾರು ಭಾಗಗಳಲ್ಲಿ ಮಿಂಚು - ಗುಡುಗು ಸಹಿತ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ.
ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಅಕ್ಟೋಬರ್ 16 ಮತ್ತು ಅಕ್ಟೋಬರ್ 22ರ ನಡುವೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಭಾರೀ ಅಥವಾ ಅತಿ ಹೆಚ್ಚಿನ ಮಳೆಯಾಗಬಹುದು. ಆದರೆ ಬಲವಾದ ಗಾಳಿಯು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳ ಮೇಲೆ ಪರಿಣಾಮ ಬೀರಬಹುದು.
ಅಲ್ಲದೆ ಈ ಅವಧಿಯಲ್ಲಿ ಕರ್ನಾಟಕದ ಕರಾವಳಿ, ಕೇರಳ ಮತ್ತು ಮಾಹೆ, ಲಕ್ಷದ್ವೀಪ, ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆ ಆಗಲಿದೆ. ಅಕ್ಟೋಬರ್ 19 ರಂದು ಉತ್ತರ ಒಳನಾಡಿನ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
IMD Weather Forecast: ಚೆನ್ನೈ, ತಮಿಳುನಾಡಿನಲ್ಲಿ ರಣಭೀಕರ ಮಳೆ
ಇನ್ನು ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈಶಾನ್ಯ ಮಾನ್ಸೂನ್ ಗುರುವಾರ ತಮಿಳುನಾಡಿನಲ್ಲಿ ಪ್ರವೇಶಿಸಿದ್ದು, ಋತುವಿನಲ್ಲಿ ರಾಜ್ಯಾದ್ಯಂತ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ಘಟ್ಟಗಳು ಮತ್ತು ನೀಲಗಿರಿ, ಕೊಯಮತ್ತೂರು, ಥೇಣಿ, ಈರೋಡ್, ತಿರುಪ್ಪೂರು, ಸೇಲಂ, ನಾಮಕ್ಕಲ್, ಧರ್ಮಪುರಿ ಮತ್ತು ತಿರುವಣ್ಣಾಮಲೈ ಸೇರಿದಂತೆ ಪಕ್ಕದ ಒಳನಾಡಿನ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.
IMD Weather Forecast: ಮುಂದಿನ ಮೂರು ಗಂಟೆಗಳಲ್ಲಿ ಕರ್ನಾಟಕದ ಈ ಭಾಗದಲ್ಲಿ ಭಾರೀ ಮಳೆ
ಇನ್ನು ಮುಂದಿನ ಮೂರು ಗಂಟೆ ಅವಧಿಯಲ್ಲಿ ಬೆಳಗಾವಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
