Get Updates
Get notified of breaking news, exclusive insights, and must-see stories!

Imd Weather Forecast: ಈ ಭಾಗಗಳಲ್ಲಿ ಮಳೆ, ಉಳಿದಂತೆ ತೀವ್ರ ಚಳಿ, ನವೆಂಬರ್ 14ರ ವರೆಗಿನ ವೆದರ್ ರಿಪೋರ್ಟ್

Imd Weather Forecast: ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಚಳಿ ವಾತಾವರಣ ಹೆಚ್ಚಳವಾಗಿದೆ. ಮಧ್ಯ ಮತ್ತು ಉತ್ತರದ ವಿವಿಧ ರಾಜ್ಯಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಳವಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಮಧ್ಯಪ್ರದೇಶ, ದೆಹಲಿ, ಉತ್ತರ ಪ್ರದೇಶ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿ ತಾಪಮಾನದಲ್ಲಿ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಐಎಂಡಿ ವರದಿಯ ಪ್ರಕಾರ ನವೆಂಬರ್ 10 ಮತ್ತು 12 ರ ನಡುವೆ ಪಶ್ಚಿಮ ಮಧ್ಯಪ್ರದೇಶದಲ್ಲಿ ಶೀತದಿಂದ ಕೂಡಿದ ತೀವ್ರ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಆದರೆ ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಪ್ರತ್ಯೇಕ ಪ್ರದೇಶಗಳು ನವೆಂಬರ್ 11 ಮತ್ತು 12 ರಂದು ಶೀತಗಾಳಿ ಹೆಚ್ಚಾಗಲಿದೆ. ನವೆಂಬರ್ 10 ರಿಂದ 14 ರವರೆಗೆ ಪೂರ್ವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಮತ್ತು ನವೆಂಬರ್ 11-13 ರವರೆಗೆ ವಿದರ್ಭ, ಜಾರ್ಖಂಡ್ ಮತ್ತು ಒಡಿಶಾದಲ್ಲೂ ಚಳಿ ಇರಲಿದೆ. ದೇಶದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Imd Weather Forecast Rain in these parts severe cold elsewhere weather report till November 14

ಮುಂದಿನ ಐದು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಆಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ರಾತ್ರಿ ಸಮಯದಲ್ಲಿ ತಾಪಮಾನದಲ್ಲಿ ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ ಮಹತ್ವದ ಬದಲಾವಣಿಗಳು ಆಗುವ ಸಾಧ್ಯತೆ ಕಡಿಮೆ ಎಂದು ವರದಿ ಉಲ್ಲೇಖಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ವಾಯುವ್ಯ ದಿಕ್ಕಿನಿಂದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಮಧ್ಯಾಹ್ನದ ವೇಳೆಗೆ ಗಂಟೆಗೆ 20 ಕಿ.ಮೀ ವೇಗವನ್ನು ತಲುಪುವ ಸಾಧ್ಯತೆಯಿದೆ ಸಂಜೆ ವೇಳೆಗೆ ಇದರ ತೀವ್ರತೆ ಕಡಿಮೆ ಇರಲಿದೆ.

ದೆಹಲಿಯಲ್ಲಿ ಬೆಳಗಿನ ಸಮಯದಲ್ಲಿ ಮಂಜು ಮುಸುಕಿದ ವಾತಾವರಣವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲದೇ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್‌ ಮತ್ತು 12 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಎರಡೂ ಋತುವಿನ ಸರಾಸರಿಗಿಂತ ಕಡಿಮೆ ಎಂದು ಹೇಳಲಾಗಿದೆ.

ದಕ್ಷಿಣ ಭಾರತದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ: ಇನ್ನು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಹ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ತೆಲಂಗಾಣದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್‌ ಇಳಿಕೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ. ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ವರದಿ ಉಲ್ಲೇಖಿಸಿದೆ.

ಈ ಭಾಗಗಳಲ್ಲಿ ಮಳೆ: ಅಪೂರಪ ಎನ್ನುವಂತೆ ದೇಶದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿರುವಾಗಲೇ ಕೇರಳ ಹಾಗೂ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಕರ್ನಾಟಕದಲ್ಲೂ ನವೆಂಬರ್‌ 12 ರಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+