IMD Weather Forecast: ಭಾರೀ ಶೀತಗಾಳಿ ನಡುವೆ ಈ ಭಾಗಗಳಲ್ಲಿ ಉತ್ತಮ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ಹಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಸದ್ಯ ದೇಶದ ಬಹುತೇಕ ಭಾಗಗಳಲ್ಲಿ ದಟ್ಟ ಮಂಜಿನ ನಡುವೆ ಭೀಕರ ಚಳಿ ವಾತಾವರಣ ಮುಂದುವರೆದಿದ್ದು, ಪರಿಣಾಮ ಜನರು ತತ್ತರಿಸಿಹೋಗಿದ್ದಾರೆ. ಅದರಲ್ಲೂ ಉತ್ತರ ಭಾರತದ ರಾಜ್ಯಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆ ಕೂಡ ಆಗುತ್ತಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಶೀತಗಾಳಿ ಮುನ್ಸೂಚನೆ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಸೋಮವಾರ ಬೆಳಗ್ಗೆ ದಟ್ಟ ಮಂಜು, ಭೀಕರ ಶೀತಗಾಳಿ ವಾತವಾರಣ ಇದ್ದು, ವಾಹನ ಸವಾರರಿಗೆ ಅಡಚಣೆ ಉಂಟುಮಾಡಿದ ಘಟನೆಗಳು ನಡೆದಿವೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಕಡಿಮೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು, ಭೀಕರ ಚಳಿ ವಾತಾವರಣ ಇರಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ. ಇನ್ನೂ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಬಿಹಾರದಾದ್ಯಂತ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ತಿಳಿಸಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ಸಲಹೆ ನೀಡಲಾಗಿದೆ.
ದಟ್ಟ ಮಂಜು ಕವಿಯುವ ಮುನ್ಸೂಚನೆ: ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ನವದೆಹಲಿ, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ ಮತ್ತು ಬಿಹಾರದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಎಲ್ಲೆಲ್ಲಿ ಮಳೆ?: ವಾರದ ಮಧ್ಯಭಾಗದಿಂದ ಹಲವೆಡೆ, ಹವಾಮಾನ ಪರಿಸ್ಥಿತಿ ಕ್ರಮೇಣ ಬದಲಾಗುವ ನಿರೀಕ್ಷೆಯಿದೆ. ಜನವರಿ 22ರಿಂದ 24 ರ ವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಶೀತಗಾಳಿ ನಡುವೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಇದೇ ಅವಧಿಯಲ್ಲಿ ದೆಹಲಿ-ಎನ್ಸಿಆರ್ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಂತಲೂ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೀಗ ಸದ್ಯ ಈ ಭಾಗಗಳ ಹಲವೆಡೆ ತೀವ್ರ ಚಳಿ ನಡುವೆಯೂ ಮಳೆಯಾಗುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು, ಬೇಸಿಗೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ.
ಇದೀಗ ಸದ್ಯ ಭಾರೀ ಶೀತಗಾಳಿ ಹಿನ್ನೆಲೆ ಜನರು ಬೆಳಗ್ಗೆ ಹಾಗೂ ಸಂಜೆ ವೇಳೆ ಮನೆಯಿಂದ ಹೊತರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಒಂದು ವೇಳೆ ಈ ವೇಳೆ ಹೊರಗಡೆ ಹೊರಡುವಾಗ ಹತ್ತಿ ಬಟ್ಟೆಯಿಂದ ತಯಾರಿಸಲಾದ ಉಡುಪುಗಳನ್ನು ಧರಿಸುವುದು ಸೂಕ್ತ. ಅಲ್ಲದೆ, ಬೆಳಗ್ಗೆ ಹಾಗೂ ಸಂಜೆ ವೇಳೆ ಭೀಕರ ಚಳಿ ಹಿನ್ನೆಲೆ ಈ ವೇಳೆ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಹೋಗದಂತೆ ತಡೆಯಬೇಕು ಎಂದು ಸಲಹೆ ನೀಡಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications