IMD Weather Forecast: ಮೈಕೊರೆಯುವ ಚಳಿ ನಡುವೆ ಈ ಭಾಗಗಳಲ್ಲಿ ನಾಲ್ಕು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಶೀತಗಾಳಿ ಬೀಸುತ್ತಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಮೈಕೊರೆಯುವ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ಮುಂದುವರೆದಿದೆ. ಈ ನಡುವೆಯೇ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಇಂದು (ಡಿಸೆಂಬರ್ 1) ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಮುಂದಿನ ನಾಲ್ಕು ದಿನ ಮಳೆ: ಜನವರಿ 5ರ ವರೆಗೆ ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ, ಪೂರ್ವ ಉತ್ತರ ಪ್ರದೇಶದಲ್ಲಿ ಜನವರಿ 2 ರವರೆಗೆ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಜನವರಿ 3ರ ವರೆಗೆ ಸಂಜೆ ಹಾಗೂ ಬೆಳಗಿನ ವೇಳೆಯಲ್ಲಿ ಮಂಜು ಕವಿದ ವಾತಾವರಣದ ಜೊತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಟ್ಟ ಮಂಜು ಕವಿದ ವಾತಾವರಣ: ಮುಂದಿನ ಮೂರು ದಿನ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮುಜಫರಾಬಾದ್ ಮತ್ತು ಜಾರ್ಖಂಡ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರೆಯಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಜನವರಿ 5ರ ವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಉತ್ತರ ಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಜನವರಿ 7ರ ವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಜನವರಿ 4ರ ವರೆಗೆ ಮತ್ತು ಪೂರ್ವ ರಾಜಸ್ಥಾನದಲ್ಲಿ ಜನವರಿ 2 ರಿಂದ 4ರವರೆಗೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 4 ಮತ್ತು 5ರಂದು ಮಧ್ಯಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದ ಎಂದು ಹಾವಾಮನ ಇಲಾಖೆ ತಿಳಿಸಿದೆ. ಇನ್ನೂ ಜನವರಿ 2ರಿಂದ 4ರ ವರೆಗೆ ಹಿಮಾಚಲ ಪ್ರದೇಶ, ಜನವರಿ 5 ಮತ್ತು 6ರಂದು ತೆಲಂಗಾಣದ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಜನವರಿ 1) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂದಿನ ಹಲವು ದಿನಗಳವರೆಗೆ ಬೆಳಗಿನ ವೇಳೆ ಕೆಲವು ಸ್ಥಳಗಳಲ್ಲಿ ದಟ್ಟವಾದ ಮಂಜು ಬೀಳಲಿದೆ. ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಶೀತಗಾಳಿ ವಾತಾವರಣ ಇರಲಿದ ಎಂದು ಮುನ್ಸೂಚನೆ ನೀಡಿದೆ.
ಮುಂದಿನ ದಿನಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯಲಿದ್ದು, ಇದು ವಾಹನ ಸಂಚಾರಕ್ಕೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಒಳಿತು ಎಂದು ಸಲಹೆ ನೀಡಿದೆ. ಈಗಾಗಲೇ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನ ಹಾರಾಟದಲ್ಲಿ ವಿಳಂಬ ಆಗಿರುವ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.












Click it and Unblock the Notifications