Get Updates
Get notified of breaking news, exclusive insights, and must-see stories!

IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭೀಕರ ಚಳಿ ನಡುವೆ ಈ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭಾರೀ ಚಳಿಗಾಳಿ ಬೀಸುತ್ತಿದೆ. ಈ ನಡುವೆಯೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಹಲವು ದಿನಗಳವರೆಗೆ ಹಲವಾರು ರಾಜ್ಯಗಳಲ್ಲಿ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ವಾತಾವರಣ ಮುಂದುವರೆಯಲಿದೆ. ಇನ್ನೂ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಹಾಗಾದ್ರೆ ಎಲ್ಲೆಲ್ಲಿ ವಾತಾವರಣ ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

IMD Weather Forecast Severe Cold Wave and Dense Fog Across India Heavy Rain Likely in Tamil Nadu

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಜನವರಿ 9ರ ಶಕ್ರವಾರ ರಾತ್ರಿ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದ್ದು, ಪರಿಣಾಮ ಈ ಭಾಗಗಳ ನಿವಾಸಿಗಳು ತತ್ತರಿಸಿದ್ದಾರೆ. ಶುಕ್ರವಾರ ಕನಿಷ್ಠ ತಾಪಮಾನವು 4.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ, ಇದು ಋತುವಿನ ಕನಿಷ್ಠ ತಾಪಮಾನವಾಗಿದೆ ಎಂದು ತಿಳಿದುಬಂದಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 15, 2024ರಂದು 3.3 ಡಿಗ್ರಿ ಸೆಲ್ಸಿಯಸ್‌ನ ಕನಿಷ್ಠ ತಾಪಮಾನವನ್ನು ದಾಖಲಿಸಿದೆ. ಇನ್ನೂ ಇಂದು ಜನವರಿ 10, 202ರ ಶನಿವಾರ ಬೆಳಗ್ಗೆ ಕೂಡ ದಟ್ಟ ಮಂಜಿನ ಜೊತೆ ಮೈಕೊರೆಯುವ ಶೀತಗಾಳಿ ಮುಂದುವರೆದಿದೆ. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ವಾಹನ ಸಂಚಾರಕ್ಕೆ ಅಡೆತಡೆ: ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಮುಂದಿನ ಹಲವು ದಿನಗಳವರೆಗೆ ಶೀತಗಾಳಿ ಮತ್ತು ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಟ್ಟ ಮಂಜು ಕವಿದ ಹಿನ್ನೆಲೆ ಹಲವೆಡೆ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದೆ. ಅಲ್ಲದೆ, ವಿಮಾನ ಮತ್ತು ರೈಲು ಸಂಚಾರದಲ್ಲಿ ವಿಳಂಬವಾದ ಘಟನೆಗಳು ಸಹ ನಡೆದಿವೆ.

ನವದೆಹಲಿ ಹವಾಮಾನ ವಿವರ: ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟ ಮಂಜಿನ ಜೊತೆ ಶೀತಗಾಳಿ ವಾತಾವರಣ ಮುಂದುವರೆಯಲಿದೆ. ಶನಿವಾರ ಕನಿಷ್ಠ ತಾಪಮಾನ 5 ರಿಂದ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಶೀತಗಾಳಿ ಎಚ್ಚರಿಕೆ: ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಶೀತಗಾಳಿ ಮತ್ತು ದಟ್ಟವಾದ ಮಂಜಿನ ಪರಿಸ್ಥಿತಿ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 9ರಿಂದ 11ರವರೆಗೆ ಪೂರ್ವ ರಾಜಸ್ಥಾನ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಶೀತಗಾಳಿ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಜನವರಿ 9, 10ರಂದು ಪಂಜಾಬ್, ಹರಿಯಾಣ, ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ, ಜನವರಿ 10ರಂದು ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಹಾಗೂ ಜನವರಿ 11ರಿಂದ 14ರ ವರೆಗೆ ರಾಜಸ್ಥಾನದಲ್ಲಿ ಭಾರೀ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಎಲ್ಲೆಲ್ಲಿ ಮಳೆ?: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಪರಿಣಾಮ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ತಮಿಳುನಾಡಿನಲ್ಲಿ ಜನವರಿ 10 ಹಾಗೂ 11ರಂದು ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+