IMD Weather Forecast: ಈ ಭಾಗಗಳಲ್ಲಿ ಒಂದು ವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಚಳಿಗಾಳಿ ಮುಂದುವರೆದಿದೆ. ಈ ನಡುವೆಯೇ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ನಿರೀಕ್ಷೆಯಿದೆ ಅಂತಲೂ ಮುನ್ಸೂಚನೆ ನೀಡಿದೆ.

ಹಿಮಪಾತವಾಗುವ ಎಚ್ಚರಿಕೆ: ಮುಂದಿನ ಹಲವು ದಿನಗಳ ಜಾಲ ಕಾಶ್ಮೀರ ಕಣಿವೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಎಲ್ಲೆಲ್ಲಿ ಮಳೆ?: ಜನವರಿ 22ರಿಂದ 24 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದ ಹಲವು ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಜನವರಿ 23 ಹಾಗೂ 24ರಂದು ಪೂರ್ವ ಉತ್ತರ ಪ್ರದೇಶದದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 22 ಮತ್ತು 23ರಂದು ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-50 ಕಿಲೋ ಮೀಟರ್ ವೇಗದಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಜನವರಿ 23ರಿಂದ 26ರ ವರೆಗೆ ಉತ್ತರಾಖಂಡದಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಜನವರಿ 22ರ ವರೆಗೆ ಹರಿಯಾಣ, ಚಂಡೀಗಢ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅದರಲ್ಲೂ ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ದಟ್ಟ ಮಂಜಿನ ಪರಿಸ್ಥಿತಿ ಇರುವ ಸಾಧ್ಯತೆಯಿದೆ. ಜನವರಿ 23ರಂದು ಹಿಮಾಚಲ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲೂ ಸಹ ಶೀತಗಾಳಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದ ಹಲವೆಡೆ ಮಳೆ: ದಕ್ಷಿಣ ಭಾರತದ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನ ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಒಂದು ವಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications