IMD Weather Forecast: ಈ ಭಾಗಗಳಲ್ಲಿ 3 ದಿನ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
IMD Weather Forecast: ದೇಶದಾದ್ಯಂತ ಹಿಂಗಾರು ಮಳೆ ತುಸು ಬಿಡುವು ನೀಡಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುತ್ತಿದ್ದು ಉಳಿದಂತೆ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ದೇಶದಾದ್ಯಂತ ಹವಾಮಾನವು ಬದಲಾಗುತ್ತಿದೆ. ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಚಳಿಗಾಲವು ಪ್ರಾರಂಭವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಬಂಗಾಳಕೊಲ್ಲಿ, ಪಶ್ಚಿಮ ಬಂಗಾಳ ಮತ್ತು ಉತ್ತರ ತಮಿಳುನಾಡಿನಲ್ಲಿ ಚಂಡಮಾರುತದ ಪ್ರಸರಣವಿದೆ. ನವೆಂಬರ್ 12 ಮತ್ತು 13 ರಂದು ತಮಿಳುನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ತಮಿಳುನಾಡು ಹಾಗೂ ಕೇರಳದಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ ಕೇರಳದಲ್ಲಿ ಮಳೆ ಆರ್ಭಟ ಇದೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ನ ಪ್ರತ್ಯೇಕ ಸ್ಥಳಗಳಲ್ಲಿ ಶೀತಗಾಳಿ ಅಲೆ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ 3 ರಿಂದ 4 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಈಶಾನ್ಯ ಭಾರತದ ರಾಜ್ಯದಲ್ಲಿ ಕನಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕುಸಿಯುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉತ್ತರಾಖಂಡದಲ್ಲಿ ಮಳೆ ಮುಂದುವರಿದಿದೆ. ಉತ್ತರಾಖಂಡದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಮುಂದುವರಿಯಲಿದೆ. ಜಾರ್ಖಂಡ್‌ನಲ್ಲಿ ಶೀತ ಅಲೆಗಳ ಎಚ್ಚರಿಕೆ ನೀಡಲಾಗಿದೆ. ಜಾರ್ಖಂಡ್‌ನ ಆರು ಜಿಲ್ಲೆಗಳಿಗೆ ಐಎಂಡಿ ಶೀತ ಅಲೆಗಳ ಎಚ್ಚರಿಕೆ ನೀಡಿದೆ. ಜಾರ್ಖಂಡ್‌ನ ಪಲಮು, ಗರ್ವಾ, ಛತ್ರ, ಗುಮ್ಲಾ, ಲತೇಹಾರ್ ಹಾಗೂ ಲೋಹ ದರ್ಗಾ ಜಿಲ್ಲೆಗಳಿಗೆ ಶೀತ ಅಲೆಗಳ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಬೆಳಗಿನ ಜಾವ ದಟ್ಟವಾದ ಮಂಜು ಇರುವ ಸಾಧ್ಯತೆ ಇದೆ.
ತಮಿಳುನಾಡಿನ ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ರಾಮನಾಥಪುರಂ, ತೂತುಕುಡಿ ಹಾಗೂ ಕನ್ಯಾಕುಮಾರಿ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇನ್ನು ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡ ಮುಂದುವರಿದಿರುವುದರಿಂದ ಹವಾಮಾನ ವಿವಿಧ ಭಾಗದಲ್ಲಿ ಮಳೆ ಆಗುತ್ತಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ವರದಿಯ ಪ್ರಕಾರ, ತಮಿಳುನಾಡಿನ ದಕ್ಷಿಣ ಕರಾವಳಿ ಪ್ರದೇಶದಲ್ಲಿ, ವಿಶೇಷವಾಗಿ ತಿರುನಲ್ವೇಲಿ ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 26 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.












Click it and Unblock the Notifications