IMD Weather Report: ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ: ಈ ಭಾಗಗಳಲ್ಲಿ ಸೆ.15ರವರೆಗೆ ಭಾರೀ ಮಳೆ: ಐಎಂಡಿ ಮುನ್ಸೂಚನೆ

IMD Weather Report: ಭಾರತದ ವಿವಿಧ ಭಾಗಗಳಲ್ಲಿ ಉತ್ತಮ ಮಳೆ ಆಗುತ್ತಿದೆ. ಬಂಗಾಳ ಕೊಲ್ಲಿ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಂಡಿರುವುದರಿಂದ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಕರ್ನಾಟಕವೂ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ದಕ್ಷಿಣ ಛತ್ತೀಸ್‌ಗಢ ಮತ್ತು ಅದರ ನೆರೆಯ ಪ್ರದೇಶಗಳ ಮೇಲಿದ್ದ ವಾಯುಭಾರ ಕುಸಿತದ ಪ್ರದೇಶವು (Low Pressure Area) ಅದೇ ಪ್ರದೇಶದಲ್ಲಿ ಮುಂದುವರಿದಿದೆ. ಇದರೊಂದಿಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯು (cyclonic circulation) ಸಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೆ ವ್ಯಾಪಿಸಿದ್ದು, ಎತ್ತರಕ್ಕೆ ಹೋದಂತೆ ನೈಋತ್ಯ ದಿಕ್ಕಿಗೆ ವಾಲಿಕೊಂಡಿದೆ. ಇದು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಛತ್ತೀಸ್‌ಗಢ ಮತ್ತು ವಿದರ್ಭದ ಮೂಲಕ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆಯಿದೆ.

IMD Weather Report Bay of Bengal Low Pressure Area Heavy Rain Expected Till September 15

ಸಮುದ್ರ ಮಟ್ಟದಲ್ಲಿರುವ ಮುಂಗಾರು ಮಾರುತಗಳ ತೊಟ್ಟಿ (Monsoon trough) ಈಗ ಜೈಸಲ್ಮರ್, ರಾಜ್‌ಗಢ, ಬೆತುಲ್, ದಕ್ಷಿಣ ಛತ್ತೀಸ್‌ಗಢ ಮತ್ತು ನೆರೆಯ ಪ್ರದೇಶಗಳ ಮೇಲಿನ ವಾಯುಭಾರ ಕುಸಿತದ ಕೇಂದ್ರ ಹಾಗೂ ಗೋಪಾಲಪುರದ ಮೂಲಕ ಹಾದುಹೋಗಿ, ಅಲ್ಲಿಂದ ಪೂರ್ವ - ಆಗ್ನೇಯ ದಿಕ್ಕಿನಲ್ಲಿ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯವರೆಗೆ ಸಾಗುತ್ತದೆ ಮತ್ತು ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ. ತಮಿಳುನಾಡಿನ ಮೂಲಕ ದಕ್ಷಿಣ ಒಳನಾಡು ಕರ್ನಾಟಕದಿಂದ ಮನ್ನಾರ್ ಕೊಲ್ಲಿಯವರೆಗೆ ಇರುವ ಹವಾಮಾನ ತೊಟ್ಟಿಯು (trough) ಮುಂದುವರಿದಿದ್ದು, ಈಗ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ವ್ಯಾಪಿಸಿದೆ.

ಮುಂದುವರಿದು ಪೂರ್ವ - ಮಧ್ಯ ಅರೇಬಿಯನ್ ಸಮುದ್ರಕ್ಕೆ ಹೊಂದಿಕೊಂಡಿರುವ ದಕ್ಷಿಣ ಕೊಂಕಣದ ಮೇಲೆ, ಸಮುದ್ರ ಮಟ್ಟದಿಂದ 3.1 ರಿಂದ 7.6 ಕಿ.ಮೀ ಎತ್ತರದ ನಡುವೆ ಇರುವ ಮೇಲ್ಮ ವಾಯುಮಂಡಲದ ಚಂಡಮಾರುತದ ಪರಿಚಲನೆಯು (upper air cyclonic circulation) ಮುಂದುವರಿದಿದೆ; ಇದು ಎತ್ತರಕ್ಕೆ ಹೋದಂತೆ ನೈಋತ್ಯ ದಿಕ್ಕಿಗೆ ವಾಲಿಕೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದರಿಂದ ವಿವಿಧ ಪ್ರದೇಶಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ವರೆಗೆ ಭಾರೀ ಮಳೆ ಇರುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಿಂದ ಕಡಿಮೆ ಒತ್ತಡದ ಪ್ರದೇಶ ಒಳನಾಡಿನತ್ತ ಚಲಿಸುತ್ತಿದೆ. ಇದರಿಂದ ಭಾರತದ ಇತರ ಭಾಗಗಳಿಗೆ ಹೊಸ ತೇವಾಂಶ ತಲುಪುತ್ತಿದ್ದು, ಮಾನ್ಸೂನ್ ಮತ್ತೆ ಸಕ್ರಿಯವಾಗುವ ಲಕ್ಷಣಗಳು ಕಾಣಿಸುತ್ತಿವೆ ಎಂದು ಹೇಳಲಾಗಿದೆ. ಕಡಿಮೆ ಒತ್ತಡದ ಪ್ರದೇಶವನ್ನು ನೈಸರ್ಗಿಕವಾಗಿ ಮಳೆ ತರುವ ವ್ಯವಸ್ಥೆ ಇದೆ. ಇದು ತೇವಾಂಶ ಇರುವ ಗಾಳಿಯನ್ನು ತನ್ನತ್ತ ಸೆಳೆಯುತ್ತದೆ. ಆ ಗಾಳಿ ಮೇಲಕ್ಕೆ ಏರಿ ತಂಪಾಗುತ್ತದೆ. ಇದರಿಂದ ಮೋಡಗಳು ರೂಪುಗೊಂಡು ಮಳೆಯಾಗುತ್ತದೆ. ಪ್ರಸ್ತುತ ದಕ್ಷಿಣ ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶದ ಕರಾವಳಿ ಸಮೀಪದ ವಾಯುವ್ಯ ಹಾಗೂ ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ.

ಈ ವ್ಯವಸ್ಥೆ ಇದೀಗ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದೆ. ಇದರಿಂದ ದೇಶದ ಒಳನಾಡು ಪ್ರದೇಶಗಳಿಗೆ ತೇವಾಂಶ ತಲುಪಿ, ಮಧ್ಯ ಮತ್ತು ಪಶ್ಚಿಮ ಭಾರತದ ಹವಾಮಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬೆಳವಣಿಗೆ ನೈಋತ್ಯ ಮಾನ್ಸೂನ್ ತನ್ನ ಕೊನೆಯ ಹಂತದಲ್ಲಿರುವ ಸಮಯದಲ್ಲಿ ಕಂಡುಬಂದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Report: ಈ ಎರಡು ರಾಜ್ಯಗಳಲ್ಲಿ ಭಾರೀ ಮಳೆ

ಇನ್ನು ಗುಜರಾತ್ - ಮಹಾರಾಷ್ಟ್ರದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಗುಜರಾತ್‌ನಲ್ಲಿ ಸೆಪ್ಟೆಂಬರ್ 15 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ ಪ್ರದೇಶದ ಕೆಲವು ಪ್ರದೇಶಗಳಲ್ಲೂ ಮಳೆ ಮುಂದುವರಿದಿದೆ. ಇದಲ್ಲದೆ, ಕೆಲವು ಪ್ರದೇಶಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿಯೂ ಸಹ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕೊಂಕಣ ಮತ್ತು ಗೋವಾದಲ್ಲಿ ಮಳೆ ಆಗುತ್ತಿದೆ.

ದೆಹಲಿ ಹಾಗೂ ಮುಂಬೈ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಕೆಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ರಾಜಧಾನಿ ಭಾಗಶಃ ಮೋಡ ಕವಿದಿರುವ ಸಾಧ್ಯತೆ ಇದ್ದು, ಮಧ್ಯಾಹ್ನ ಮತ್ತು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಕೆಲವು ದಿನಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದೇಶದ ಹಲವಾರು ಭಾಗಗಳಲ್ಲಿ ಮಳೆ ಸಕ್ರಿಯವಾಗಿ ಮುಂದುವರಿಯುವ ನಿರೀಕ್ಷೆಯಿದೆ. ಮಧ್ಯ, ಪೂರ್ವ, ಈಶಾನ್ಯ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

IMD Weather Report: ದಕ್ಷಿಣ ಭಾರತದಲ್ಲಿ ಮಳೆ

ಕರ್ನಾಟಕದಲ್ಲಿ ಮಳೆ ಕೊರತೆ ಎದುರಾಗಿದೆ. ಆದರೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕೇರಳ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಿಂಚು - ಗುಡುಗು ಸಹಿತ ಮತ್ತು ಬಿರುಗಾಳಿಯ ಗಾಳಿ ಬೀಸುವ ಸಾಧ್ಯತೆಯಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+