IMD Weather Report: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರೀ ಮಳೆ; ಅ.9ರ ಮಳೆ ಮುನ್ಸೂಚನೆ ಏನಿದೆ ?
IMD Weather Report: ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ನೈಋತ್ಯ ಮುಂಗಾರು ಅಕ್ಟೋಬರ್ 8ರಂದು ಮಹಾರಾಷ್ಟ್ರದ ಉಳಿದ ಭಾಗಗಳು; ಗೋವಾ, ಕರ್ನಾಟಕ, ತೆಲಂಗಾಣ ಮತ್ತು ಒಡಿಶಾದ ಕೆಲವು ಭಾಗಗಳು; ಹಾಗೂ ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಇನ್ನೂ ಕೆಲವು ಭಾಗಗಳಿಂದ ಹಿಮ್ಮೆಟ್ಟಿದೆ. ಆದರೆ, ದೇಶದ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.
ನೈಋತ್ಯ ಮುಂಗಾರು ಹಿಮ್ಮೆಟ್ಟುವಿಕೆಯ ರೇಖೆಯು ಈಗ 27.5°N/86.5°E, ಸುಪೌಲ್, ರಾಂಚಿ, ಸುಂದರ್‌ಗಢ, ಬಾರ್ಗಢ, ಬಿಜಾಪುರ, ಹೈದರಾಬಾದ್, ಬೆಳಗಾವಿ, ಪಣಜಿ ಮತ್ತು 15°N/72°E ಮೂಲಕ ಹಾದುಹೋಗುತ್ತದೆ. ಮುಂದಿನ 3-4 ದಿನಗಳಲ್ಲಿ ಪೂರ್ವ ಭಾರತ ಮತ್ತು ಉತ್ತರ ದ್ವೀಪಕಲ್ಪದ (Northern Peninsula) ಇನ್ನೂ ಕೆಲವು ಭಾಗಗಳು ಹಾಗೂ ಈಶಾನ್ಯ ಭಾರತದ ಅನೇಕ ಭಾಗಗಳಿಂದ ನೈಋತ್ಯ ಮುಂಗಾರು ಮತ್ತಷ್ಟು ಹಿಮ್ಮೆಟ್ಟಲು ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ. ಲಕ್ಷದ್ವೀಪ ಮತ್ತು ಅದರ ಪಕ್ಕದ ಆಗೇಯ ಅರೇಬಿಯನ್ ಸಮುದ್ರದ ಮೇಲಿದ್ದ ಮೇಲೆ ಸುಳಿಗಾಳಿ (Cyclonic circulation) ಈಗ ದಕ್ಷಿಣ ಕೇರಳ ಕರಾವಳಿಯ ಮೇಲೆ, ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ನೆಲೆಗೊಂಡಿದೆ.

ದಕ್ಷಿಣ ಕೇರಳ ಕರಾವಳಿಯ ಮೇಲಿನ ಸುಳಿಗಾಳಿಯಿಂದ ದಕ್ಷಿಣ ಒಳನಾಡು ಕರ್ನಾಟಕದವರೆಗೆ ವಿಸ್ತರಿಸಿರುವ 'ಟ್ರಫ್' (trough) ಈಗ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಪೂರ್ವ ಉತ್ತರ ಪ್ರದೇಶದಿಂದ ರಾಯಲಸೀಮೆಯವರೆಗೆ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದ ಮೂಲಕ ಹಾದುಹೋಗುತ್ತಿದ್ದ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದ 'ಟ್ರಫ್' ಈಗ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುನ್ಸೂಚನೆ ಇಲ್ಲ. ಗರಿಷ್ಠ ತಾಪಮಾನವು 33 ರಿಂದ 35 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಕನಿಷ್ಠ ತಾಪಮಾನ 22 ರಿಂದ 24 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಶುಕ್ರವಾರ ಹವಾಮಾನದಲ್ಲಿ ಸ್ವಲ್ಪ ಬದಲಾವಣೆ ಆಗುವ ನಿರೀಕ್ಷೆಯಿದೆ. ಅಕ್ಟೋಬರ್ 9 ರಂದು ದೆಹಲಿಯ ಕೆಲವು ಸ್ಥಳಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆ ಇದೆ.
ಗುರುವಾರ ಭಾರತದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಮತ್ತು ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದಲ್ಲಿ, ಜಮ್ಮು ಮತ್ತು ಕಾಶ್ಮೀರ-ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಪ್ರತ್ಯೇಕ ಅಥವಾ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಆದರೆ ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು - ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಜಾರ್ಖಂಡ್, ಬಿಹಾರ, ಒಡಿಶಾ, ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಜಾರ್ಖಂಡ್, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
IMD Weather Report: ದಕ್ಷಿಣ ಭಾರತದಲ್ಲಿ ಭಾರೀ ಮಳೆ
ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಭಾರತದಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಆಂಧ್ರಪ್ರದೇಶದ ಕರಾವಳಿ, ರಾಯಲಸೀಮಾ ಮತ್ತು ಕರ್ನಾಟಕದಾದ್ಯಂತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಮತ್ತು ಮಾಹೆ ಮತ್ತು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


Click it and Unblock the Notifications
