Imd Weather Report: ಈಶಾನ್ಯ ಮಾನ್ಸೂನ್ ಚುರುಕು: ಈ ಭಾಗಗಳಲ್ಲಿ ಧಾರಾಕಾರ ಮಳೆ, ಉಳಿದೆಡೆ ಚಳಿ ಹೆಚ್ಚಳ!
Imd Weather Report: ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮತ್ತೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಮತ್ತೆ ದೇಶದ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ. ನವೆಂಬರ್ 16 ಮತ್ತು ನವೆಂಬರ್ 19 ರ ನಡುವೆ ವಿವಿಧ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಅಲ್ಲದೇ ಇಂದಿನಿಂದ ದೇಶದ ವಿವಿಧ ರಾಜ್ಯದಲ್ಲಿ ಚಳಿ ಪ್ರಮಾಣವು ಹೆಚ್ಚಳವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.
ಕಳೆದ ವಾರದಿಂದ ಈಶಾನ್ಯ ಮಾನ್ಸೂನ್ ವಿರಾಮ ನೀಡಿತ್ತು. ಇದೀಗ ದೇಶದ ವಿವಿಧ ಭಾಗದಲ್ಲಿ ಈಶಾನ್ಯ ಮಾನ್ಸೂನ್ ಮತ್ತೆ ಸಕ್ರಿಯವಾಗಿದ್ದು ವಿವಿಧ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಭಾರತದ ತಮಿಳುನಾಡು ಹಾಗೂ ಕೇರಳದಲ್ಲಿ ಭಾರೀ ಮಳೆ ಆಗುವ ನಿರೀಕ್ಷೆ ಇದ್ದು, ಕರ್ನಾಟಕದಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಪ್ರಾದೇಶಿಕ ಹವಾಮಾನ ಕೇಂದ್ರದ ವರದಿಯ ಪ್ರಕಾರ, ಭಾನುವಾರದಿಂದ ರಾಜ್ಯದಾದ್ಯಂತ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ತಂಜಾವೂರು ಮತ್ತು ಮೈಲಾಡುತುರೈ ಸೇರಿದಂತೆ ನಾಲ್ಕು ಜಿಲ್ಲೆಗಳು ಹಾಗೂ ಕಾರೈಕಲ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್ 17 ರಂದು ತಿರುವರೂರು, ವಿಲ್ಲುಪುರಂ, ನಾಗಪಟ್ಟಣಂ, ಕಡಲೂರು, ಮತ್ತು ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸೇರಿದಂತೆ 11 ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಲಿದೆ. ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಆರ್ಭಟ ಇರಲಿದೆ. ನವೆಂಬರ್ 18 ರಂದು ದಕ್ಷಿಣ ಕರಾವಳಿ ತಮಿಳುನಾಡು - ತೂತುಕುಡಿ, ತಿರುನಲ್ವೇಲಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಕರ್ನಾಟಕದ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ
ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ನವೆಂಬರ್ 16 ಮತ್ತು 18ರ ನಡುವೆ ತಮಿಳುನಾಡಿನಾದ್ಯಂತ ಹೆಚ್ಚಿನ ಸ್ಥಳಗಳಲ್ಲಿ ಮತ್ತು ನವೆಂಬರ್ 17ರಿಂದ 19ರ ನಡುವೆ ಕೇರಳ, ಆಂಧ್ರಪ್ರದೇಶ ಕರಾವಳಿ ಪ್ರದೇಶ, ಯಾನಂ ಹಾಗೂ ರಾಯಲಸೀಮಾದ ವಿವಿಧ ಭಾಗದಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಕರ್ನಾಟಕದ ಬೆಂಗಳೂರು ಹಾಗೂ ವಿವಿಧ ಭಾಗದಲ್ಲೂ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಆಂಧ್ರಪ್ರದೇಶ ಕರಾವಳಿ ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ವಿಶೇಷವಾಗಿ ನವೆಂಬರ್ 16 ಮತ್ತು 17 ರ ನಡುವೆ ಮಿಂಚು - ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಭಾರತದ ವಿವಿಧ ಭಾಗದಲ್ಲಿ ಚಳಿ ಹೆಚ್ಚಳ
ಇನ್ನು ದಕ್ಷಿಣ ಭಾರತದಲ್ಲಿ ಮಳೆ ಆಗುತ್ತಿದ್ದರೆ, ಉತ್ತರ ಭಾರತದ ವಿವಿಧ ಪ್ರದೇಶಗಳಲ್ಲಿ ಚಳಿ ಹೆಚ್ಚಳವಾಗಿದೆ. ಮಧ್ಯ ಭಾರತದಲ್ಲಿ ಭಾರೀ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ಮಧ್ಯಪ್ರದೇಶಕ್ಕೆ ಶೀತ ಅಲೆಯಿಂದ ತೀವ್ರ ಚಳಿ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ನವೆಂಬರ್ 16 ರವರೆಗೆ ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲೂ ಇದೇ ವಾತಾವರಣ ಇದೆ. ಭಾರತದ ಬಯಲು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್, ರಾಜ್‌ಗಢ (ಮಧ್ಯಪ್ರದೇಶ) ಮತ್ತು ಅಂಬಿಕಾಪುರ (ಛತ್ತೀಸ್‌ಗಢ) ದಲ್ಲಿ ದಾಖಲಾಗಿದೆ ಎಂದು ಐಎಂಡಿ ರಿಪೋರ್ಟ್ ತಿಳಿಸಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications