IMD Weather Forecast: ಈ ಭಾಗಗಳಲ್ಲಿ ದಟ್ಟ ಮಂಜು, ಭಾರೀ ಶೀತಗಾಳಿ ಮುನ್ಸೂಚನೆ
IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಭಾರೀ ಶೀತಗಾಳಿ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಹಲವು ಭಾಗಗಳಲ್ಲಿ ದಟ್ಟ ಮಂಜಿನ ಜೊತೆ ಭಾರೀ ಚಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ದಟ್ಟ ಮಂಜಿನ ತೀವ್ರ ಚಳಿ ಪರಿಸ್ಥಿತಿ ಮುಂದುವರೆದಿದೆ. ಮುಂಬರುವ ದಿನಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ನವದೆಹಲಿ ಹವಾಮಾನ: ಮುಂದಿನ ಹಲವು ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಲ್ಲಿ ಭಾರೀ ಚಳಿಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಜನವರಿ 17) ಬೆಳಗ್ಗೆ ದಟ್ಟ ಮಂಜು, ಚಳಿ ವಾತಾವರಣ ಇತ್ತು. ಕನಿಷ್ಠ ತಾಪಮಾನವು 6 ರಿಂದ 8 ಡಿಗ್ರಿ ಸೆಲ್ಸಿಯಸ್ ಇದ್ದರೆ. ಗರಿಷ್ಠ ತಾಪಮಾನವು 16-17 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ವಾಹನ ಸವಾರರಿಗೆ ಅಡಚಣೆ: ಈ ಭಾಗದಲ್ಲಿ ಇಂದು ಬೆಳಗ್ಗೆ ಶೀತಗಾಳಿ ಜೊತೆ ದಟ್ಟ ಮಂಜು ಕವಿದಿದ್ದು, ವಾಹನ ಸವಾರರು, ರೈಲು ಮತ್ತು ವಿಮಾನ ಪ್ರಯಾಣದ ಮೇಲೆ ಅಡಚಣೆ ಉಂಟುಮಾಡಿದ ಘಟನೆಗಳು ನಡೆದವು. ಹಾಗೆಯೇ ಸಂಜೆ ವೇಳೆಯೂ ಸಹ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಉತ್ತರ ಪ್ರದೇಶದಲ್ಲಿ ತೀವ್ರ ಮಂಜಿನ ವಾತಾವರಣ ಮುಂದುವರೆದಿದೆ. ಶುಕ್ರವಾರ ಬೆಳಿಗ್ಗೆ 50ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ದಟ್ಟ ಮಂಜು ಕವಿದಿದ್ದು, ಹಲವಾರು ಪ್ರದೇಶಗಳಲ್ಲಿ ರಸ್ತೆಗಳನ್ನು ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ದಟ್ಟ ಮಂಜು ಭಾರೀ ಚಳಿ ಹಿನ್ನೆಲೆ 53 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿಯತ್ತು. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಅಲ್ಲದೆ, ಪಂಜಾಬ್ ಮತ್ತು ಹರಿಯಾಣದಲ್ಲಿ ತೀವ್ರ ಶೀತ ವಾತಾವರಣ ಮುಂದುವರೆದಿದೆ. ಈಗಾಗಲೇ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ಹರಿಯಾಣದ ಭಿವಾನಿಯಲ್ಲಿ ಸುಮಾರು 1.5 ಡಿಗ್ರಿ ಇಳಿಕೆಯಾಗಿದೆ. ರಾಜಸ್ಥಾನದಲ್ಲಿಯೂ ಸಹ ಭಾರೀ ಚಳಿ ಮುಂದುವರೆದಿದೆ. ಅಲ್ವಾರ್, ನಾಗೌರ್, ಫತೇಪುರ್ ಮತ್ತು ಕರೌಲಿಯಂತಹ ನಗರಗಳಲ್ಲಿ ಹಾಗೂ ಜೈಪುರದಲ್ಲಿ ಕನಿಷ್ಠ ತಾಪಮಾನಲ್ಲಿ ಇಳಿಕೆಯಾದ ಬಗ್ಗೆ ವರದಿಯಾಗಿದೆ.
ಕಾಶ್ಮೀರ ಕಣಿವೆಯಲ್ಲಿ ಹಗಲಿನ ತಾಪಮಾನದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿದೆ. ಆದರೆ, ರಾತ್ರಿ ವೇಳೆ ಭಾರೀ ಚಳಿಗಾಳಿ ಮುಂದುವರೆದಿದೆ. ಈಗಾಗಲೇ ಶ್ರೀನಗರದಲ್ಲಿ ಮೈನಸ್ 1.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಪುಲ್ವಾಮಾದಲ್ಲಿ ಮೈನಸ್ 4.6 ಡಿಗ್ರಿಗೆ ಇಳಿದಿದೆ. ಅನೇಕ ಪ್ರದೇಶಗಳಲ್ಲಿ ಹಿಮ ಮತ್ತು ಹಿಮಪಾತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಜನರಿಗೆ ಎಚ್ಚರಿಕೆ ಸಂದೇಶ: ಹಾಗೂ ಜನರಿಗೆ ಈಗಾಗಲೇ ಪಾಲಂ ಸೇರಿದಂತೆ ಹಲವಾರು ಸ್ಥಳಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣ ಆಗಿದೆ. ಐಎಂಡಿ ಜನರಿಗೆ ಎಚ್ಚರಿಕೆ ನೀಡಿದ್ದು, ವೃದ್ಧರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಅನಗತ್ಯವಾಗಿ ಬೆಳಗ್ಗೆ ಹಾಗೂ ಸಂಜೆ ವೇಳೆ ಮನೆಯಿಂದ ಹೊರಗಡೆ ಬರುವುದನ್ನು ತಪ್ಪಿಸಬೇಕು ಎಂದು ಎಚ್ಚರಿಕೆ ಸಂದೇಶವನ್ನು ನೀಡಿದೆ. ಅಲ್ಲದೆ, ಆದಷ್ಟು ಬೆಚ್ಚಗಿನ ನೀರು ಬಳಕೆ ಮಾಡುವಂತೆ ಸೂಚನೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications