Imd Weather Update: ಮುರಸು ಚಂಡಮಾರುತ ಅಬ್ಬರ: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ಈ ಭಾಗಗಳಲ್ಲಿ ಭಾರೀ ಮಳೆ; ಐಎಂಡಿ ರಿಪೋರ್ಟ್
ಕರ್ನಾಟಕವೂ ಸೇರಿದಂತೆ ದೇಶದ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅನರ್ಬ್ ಚಂಡಮಾರುತದ ನಂತರ ಮುರಸು ಚಂಡಮಾರುತ ಪ್ರಭಾವವು ತೀವ್ರವಾಗಿದೆ. ಮುರಸು ಚಂಡಮಾರುತವು ನವೆಂಬರ್ 3ರ ಆರಂಭದಲ್ಲಿ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ದಾಟಿ, ಹಲವಾರು ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಆಗಿದೆ.
ತೆಲುಗು ರಾಜ್ಯಗಳಲ್ಲಿ ಭಾರೀ ಆಗುತ್ತಿದ್ದು, ಆಂಧ್ರಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಮುಂದಿನ ದಿನಗಳಲ್ಲಿ ದಕ್ಷಿಣ, ಮಧ್ಯ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಮುನ್ಸೂಚನೆ ನೀಡಿದೆ. ಚಂಡಮಾರುತವು ನವೆಂಬರ್ 3ರ ಮುಂಜಾನೆ ಪ್ರಕಾಶಂ ಜಿಲ್ಲೆಯ ಓಂಗೋಲ್ ಬಳಿಯ ನೆಲ್ಲೂರು ಮತ್ತು ನರಸಾಪುರದ ನಡುವೆ ಕರಾವಳಿಯನ್ನು ದಾಟಿದ್ದು. ಭೂಕುಸಿತದ ಸಮಯದಲ್ಲಿ, ಗರಿಷ್ಠ 95-105 ಕಿ.ಮೀ ವೇಗದಲ್ಲಿ ಗಾಳಿ ಬೀಸಿತ್ತು.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಆರ್ಭಟ
ಆಂಧ್ರಪ್ರದೇಶವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಆಂಧ್ರಪ್ರದೇಶವು ಮುರಸು ಚಂಡಮಾರುತದಿಂದ ತತ್ತರಿಸಿದೆ. ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಮುಂದಿನ 12 ಗಂಟೆಗಳಲ್ಲಿ ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 3 ರಂದು ರಾತ್ರಿ 11.30 ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂನ ಕೆಲವು ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗುವ ಆತಂಕ ಇದೆ. ಬಾಪಟ್ಲಾ, ಗುಂಟೂರು, ಕೃಷ್ಣ, ಪಲ್ನಾಡು, ಪ್ರಕಾಶಂ ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಿಂಚು- ಗುಡುಗು ಸಹಿತ ಮಳೆ ಆಗಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 80-90 ಕಿ.ಮೀ ವೇಗದಲ್ಲಿ ಇರಲಿದೆ. ತೆಲಂಗಾಣದಲ್ಲಿಯೂ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ರಾಯಲಸೀಮಾದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 70-80 ಕಿ.ಮೀ ವೇಗದಲ್ಲಿ ಇರಲಿದೆ.
ನವೆಂಬರ್ 7ರ ವರೆಗೆ ಈ ಪ್ರದೇಶಗಳಲ್ಲೂ ಮಳೆ ಆರ್ಭಟ
ಇನ್ನು ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಇರಲಿದೆ. ನವೆಂಬರ್ 3 ರಿಂದ 8 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆ ಆಗಲಿದೆ. ನವೆಂಬರ್ 3 ಮತ್ತು ನವೆಂಬರ್ 5-7 ರಂದು ಏಕಾಏಕಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 3 ರಿಂದ 8 ರವರೆಗೆ ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 3-6 ರವರೆಗೆ ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಆದರೆ ನವೆಂಬರ್ 3 ಮತ್ತು 8 ರ ನಡುವೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆ ಇರಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ಮಧ್ಯ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ನವೆಂಬರ್ 3-4 ರವರೆಗೆ ಮಳೆ ಇರಲಿದೆ. ಛತ್ತೀಸ್‌ಗಢದಲ್ಲಿ ವ್ಯಾಪಕ ಮಳೆಯಾಗುವ ಸಾಧುತೆ ಇದೆ. ನವೆಂಬರ್ 3-5 ರವರೆಗೆ ಪೂರ್ವ ಮಧ್ಯಪ್ರದೇಶ, ಪಶ್ಚಿಮ ಮಧ್ಯಪ್ರದೇಶ ಮತ್ತು ವಿದರ್ಭದಲ್ಲಿ ಪ್ರತ್ಯೇಕ ಅಥವಾ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 5 ಮತ್ತು 6 ರಂದು ಪೂರ್ವ ಮಧ್ಯಪ್ರದೇಶದಲ್ಲಿ ಮಳೆ ಮುಂದುವರಿಯಲಿದೆ.
ಇನ್ನು ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಾಗಿ ಶುಷ್ಕ ವಾತಾವರಣ ಇರಲಿದೆ. ದೆಹಲಿ-ಎನ್‌ಸಿಆರ್, ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಮಳೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Click it and Unblock the Notifications
