IMD Weather: ಕರ್ನಾಟಕ, ದೇಹಲಿ ಸೇರಿ ಈ ಭಾಗಗಳಲ್ಲಿ ಅಧಿಕ ಚಳಿ, ಶೀತ ಅಲೆ ಮುನ್ಸೂಚನೆ
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಚಳಿಗಾಲ ತೀವ್ರಗೊಂಡಿದೆ. ಉತ್ತರ ಮತ್ತು ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಶೀತ ಅಲೆಗೆ ಜನರು ನಡುಗಿದ್ದಾರೆ. ಕಡಿಮೆ ತಾಪಮಾನದ ದಿನಗಳು ಇನ್ನೂ ಐದು ದಿನ ಮುಂದುವರಿಯುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹತ್ವದ ಮುನ್ಸೂಚನೆ ನೀಡಿದೆ.
ಸಮುದ್ರದ ಮೇಲ್ಭಾಗದಲ್ಲಿ ಒಂದಷ್ಟು ಬದಲಾವಣೆಗಳು, ಬಿರುಗಾಳಿ ವಾತಾವರಣ ನಿರ್ಮಾಣವಾಗಿವೆ. ಛತ್ತೀಸ್ಗಢ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್, ಜಾರ್ಖಂಡ್ ಮತ್ತು ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಶೀತ ಅಲೆಗಳ ಪ್ರಭಾವ ಹೆಚ್ಚಾಗಿರಲಿದೆ. ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದ ಕೆಲ ಪ್ರತ್ಯೇಕ ಕಡೆಗಳಲ್ಲಿ ತೀವ್ರ ಚಳಿ ಕಂಡು ಬರುವ ನಿರೀಕ್ಷೆ ಇದೆ. ಇದರಿಂದ ದಿನದ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಅಸ್ಸಾಂ ಮತ್ತು ಮೇಘಾಲಯ, ಬಿಹಾರ, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪೂರ್ವ ಮಧ್ಯಪ್ರದೇಶ, ನಾಗಾಲ್ಯಾಂಡ್, ಒಡಿಶಾ ಹಾಗೂ ಉಪ ಹಿಮಾಲಯ ವ್ಯಾಪ್ತಿಯಲ್ಲಿ ದಟ್ಟ ಮಂಜಿನ ವಾತಾವರಣ ಉಂಟಾಗಲಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿ, ಹಿಮಾಚಲ ಪ್ರದೇಶ, ಜಮ್ಮು–ಕಾಶ್ಮೀರ, ಪಂಜಾಬ್ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಮುಂದಿನ ಒಂದು ವಾರ ದಟ್ಟ ಮಂಜು ಬೀಳಲಿದೆ. ಅದರ ಪರಿಣಾಮ ರೈಲು ಹಾಗೂ ವಿಮಾನಗಳ ಸಂಚಾರದ ಮೇಲೆ ಆಗುವ ಸಂಭವವಿದೆ.
ಕೊಮೊರಿನ್ ಪ್ರದೇಶ ಮತ್ತು ಮನ್ನಾರ್ ಕೊಲ್ಲಿಯ ಪಕ್ಕದ ಸಮುದ್ರ ಪ್ರದೇಶಗಳಲ್ಲಿ ಗಂಟೆಗೆ 45 ರಿಂದ 55 ಕಿಲೋಮೀಟರ್ ವೇಗದಲ್ಲಿ, ಕೆಲವೆಡೆ 65 ಕಿಲೋಮೀಟರ್ ವೇಗದವರೆಗೆ ಗಾಳಿ ಬೀಸುವ ಸಾಧ್ಯತೆ ಇದೆ. ಸದ್ಯ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಿಲ್ಲ ಎಂದು ತಿಳಿಸಲಾಗಿದೆ.
ಚಂಡಮಾರುತ ಪರಿಚಲನೆ ನಿರ್ಮಾಣ
ಈಶಾನ್ಯ ಭಾರತದ ಭೂಮಿ ಮೇಲ್ಮೈನಲ್ಲಿ ಸುಳಿಗಾಳಿ ಎದ್ದಿದೆ. ಅದು ಸಮುದ್ರ ಮಟ್ಟದಿಂದ ಸರಾಸರಿ 12.6 ಕಿಲೋಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ಅದು ಈಶಾನ್ಯ ಭಾರತದ ಮೇಲೆ ಮುಂದುವರಿಯುತ್ತದೆ. ಜೊತೆಗೆ ದಕ್ಷಿಣ ಕೇರಳಕ್ಕೆ ಹೊಂದಿಕೊಂಡಿರುವ ಆಗ್ನೇಯ ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸಮುದ್ರ ಮಟ್ಟದಿಂದ ಸರಾಸರಿ 1.5 ಕಿಲೋಮೀಟರ್ ವರೆಗೆ ವಾಯು ಚಂಡಮಾರುತ ಪರಿಚಲನೆ ಮುಂದುವರಿದಿದೆ. ಇದು ಸದ್ಯಕ್ಕೆ ಅಷ್ಟೇನು ತಿವ್ರಗೊಳ್ಳುವ ಲಕ್ಷಣಗಳು ಇಲ್ಲ ಎನ್ನಲಾಗಿದೆ.
ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ
ಈ ಸಣ್ಣಪುಟ್ಟ ಹವಾಮಾನ ವೈಪರೀತ್ಯಗಳಿಂದ ಡಿಸೆಂಬರ್ 28ರ ವರೆಗೆ ಪಶ್ಚಿಮ ಹಿಮಾಲಯ, ತಮಿಳುನಾಡು, ಕೇರಳ, ಕರ್ನಾಟಕ ಹಾಗೂ ದ್ವೀಪ ಪ್ರದೇಶಗಳಲ್ಲಿ ಪ್ರತ್ಯೇಕ ಮಳೆ ಚಟುವಟಿಕೆ ಕಂಡುಬರುವ ಸಾಧ್ಯತೆ ಇದೆ. ಮಬ್ಬು ವಾತಾವರಣ ಜೊತೆಗೆ ಜೊತೆಗೆ ಹೆಚ್ಚಿನ ಚಳಿ ಅನುಭವವಾಗಲಿದೆ. ದಟ್ಟ ಮಂಜು ಸಹ ಬೀಳಲಿದೆ ಎಂದು ಹವಾಮಾನ ಇಲಾಖೆಯ ಗುರುವಾರದ ವರದಿ ತಿಳಿಸಿದೆ.
-
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications