Narendra Modi: ದೆಹಲಿ ಅಭಿವೃದ್ಧಿಗೆ ಇಂದು ಮಹತ್ವದ ದಿನ: ಪ್ರಧಾನಿ ಮೋದಿ
ನವದೆಹಲಿ, ಜನವರಿ 03: ಲೋಕಸಭಾ ಚುನಾವಣೆಯ ಬಳಿಕ ಮೋದಿ ಸರ್ಕಾರ ಮತ್ತೆ ರಚನೆಯಾಗಿದ್ದು, ಇದೀಗ ರಾಷ್ಟ್ರ ರಾಜಧಾನಿ ದೆಹಲಿ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ದೆಹಲಿ ಅಭಿವೃದ್ದಿಗೆ ಮಹತ್ವದ ದಿನ ಎಂದು ಹೇಳಿದ್ದಾರೆ. ವಸತಿ, ಶಿಕ್ಷಣ ಸೇರಿದಂತೆ ಹಲವಾರು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಕುರಿತು ಪೋಸ್ಟ್ ಮಾಡಿದ್ದಾರೆ.

ದೆಹಲಿಯ ಅಭಿವೃದ್ಧಿಗೆ ಇಂದು ಮಹತ್ವದ ದಿನವಾಗಿದ್ದು, ಅಶೋಕ ವಿಹಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೆಹಲಿ ಜನರಿಗೆ ನೆರವಾಗುವ ನಿಟ್ಟಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇನ್ನೂ ಪ್ರಧಾನಿ ಮೋದಿ ಅವರು ಜೆಜೆ ಕ್ಲಸ್ಟರ್‌ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ 1,675 ಫ್ಲ್ಯಾಟ್‌ಗಳನ್ನು ಉದ್ಘಾಟಿಸಲಿದ್ದಾರೆ. 'ದೇಶದ ಪ್ರತಿಯೊಬ್ಬ ನಾಗರಿಕರಿಗೂ ವಸತಿ ಕಲ್ಪಿಸಲು ನಾವು ಬದ್ಧರಾಗಿದ್ದೇವೆ ಎಂದು ಮೋದಿ ಅವರು ತಿಳಿಸಿದ್ದಾರೆ.
ಪ್ರತಿಯೊಬ್ಬ ಭಾರತೀಯನಿಗೂ ಸರಿಯಾದ ವಸತಿಯನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ, ಇನ್-ಸಿಟು ಸ್ಲಂ ಪುನರ್ವಸತಿ ಯೋಜನೆಯಡಿಯಲ್ಲಿ ಹೊಸದಾಗಿ ನಿರ್ಮಿಸಲಾದ 1,675 ಫ್ಲಾಟ್‌ಗಳನ್ನು ಉದ್ಘಾಟಿಸಲಾಗುವುದು. ಇದು ಹಲವಾರು ಜನರಿಗೆ ಉತ್ತಮ ಮತ್ತು ಆರೋಗ್ಯಕರ ಜೀವನವನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಸ
ವೀರ್ ಸಾವರ್ಕರ್ ಅವರ ಹೆಸರಿನ ಕಾಲೇಜ್‌ನ ಶಂಕುಸ್ಥಾಪನೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಯೋಜನೆಗಳ ಪ್ರಾರಂಭವು ಶೈಕ್ಷಣಿಕ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ವಿದ್ಯಾರ್ಥಿಗಳಿಗೆ ವಿಶ್ವ ದರ್ಜೆಯ ಕಲಿಕಾ ವಾತಾವರಣವನ್ನು ಒದಗಿಸಲು ಸಹಾಯ ಮಾಡುತ್ತದೆ. ದೆಹಲಿ ಶಿಕ್ಷಣದ ಕೇಂದ್ರವಾಗಿ ಗುರುತಿಸಿಕೊಂಡಿದೆ, ಭಾರತದಾದ್ಯಂತ ವಿದ್ಯಾರ್ಥಿಗಳನ್ನು ಸೆಳೆಯುತ್ತಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು.
ಬೆಳವಣಿಗೆ ಮತ್ತು ಕಲಿಕೆಯನ್ನು ಪ್ರೇರೇಪಿಸುವ ವಾತಾವರಣದಲ್ಲಿ ಜ್ಞಾನ, ನಾವೀನ್ಯತೆ ಮತ್ತು ಅವಕಾಶಗಳೊಂದಿಗೆ ಸಬಲೀಕರಣಗೊಳಿಸುವ ಮೂಲಕ ಭವಿಷ್ಯದ ಪೀಳಿಗೆಯನ್ನು ಪೋಷಿಸುವ ನಮ್ಮ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು.
ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯನ್ನ ನಡೆಸುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂಲಸೌಕರ್ಯ ಯೋಜನೆಗಳ ಕುರಿತು ಆಡಳಿತ ಪಕ್ಷದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮೂಲಕ ದೆಹಲಿ ವಿಧಾನಸಭಾ ಚುನಾವಣೆಗೆ ಸಕಲ ಸಿದ್ದತೆಯನ್ನ ಬಿಜೆಪಿ ಮಾಡಿಕೊಳ್ಳುತ್ತಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications