ಯುಜಿಸಿಯಿಂದ ಮಹತ್ವದ ನಿರ್ಧಾರ; ಏನಿದು?
UGC: ಪದವಿ ಪಡೆಯುವ ಅಥವಾ ಪದವಿ ಪಡೆಯಲು ಹೊರಟಿರುವ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದು ಸಿಕ್ಕಂತಾಗಿದೆ. ಯುಜಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ ಗಮನಿಸಿ.
ಸಮಿತಿಯ ಶಿಫಾರಸಿನ ಪ್ರಕಾರ, ಮುಂದಿನ ಅವಧಿಯಿಂದ ವಿದ್ಯಾರ್ಥಿಗಳು ತಮ್ಮ ಪದವಿಯನ್ನು ಸಮಯಕ್ಕೆ ಮುಂಚಿತವಾಗಿ ಪೂರ್ಣಗೊಳಿಸಲು ಸಾಧ್ಯ ಆಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು 4 ವರ್ಷಗಳ ಪದವಿ ಕಾರ್ಯಕ್ರಮವನ್ನು 3 ವರ್ಷಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಮತ್ತು 3 ವರ್ಷಗಳ ಪದವಿ ಕಾರ್ಯಕ್ರಮವನ್ನು 2.5 ವರ್ಷಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ಜೊತೆಗೆ 3 ವರ್ಷದ ಕಾರ್ಯಕ್ರಮವನ್ನು 4 ವರ್ಷದ ಪದವಿ ಕಾರ್ಯಕ್ರಮವನ್ನಾಗಿ ಪರಿವರ್ತಿಸಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP)-2020 ಅಡಿಯಲ್ಲಿ ಯುಜಿಸಿ ಈ ಬದಲಾವಣೆಯನ್ನು ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದರಡಿಯಲ್ಲಿ ತ್ವರಿತವಾಗಿ ಕಲಿಯುವ ಮತ್ತು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಸುಲಭವಾಗಿ ಪಡೆದುಕೊಳ್ಳಲು ಮತ್ತು ಸಮಯಕ್ಕೆ ಮುಂಚಿತವಾಗಿ ತಮ್ಮ ಪದವಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಯ ಉಳಿತಾಯವಾ ಆದಂತಾಗುತ್ತದೆ.
ಸಮಿತಿಯು ಈ ಸಲಹೆಗಳೇನು?: ಐಐಟಿ ಮದ್ರಾಸ್‌ನ ನಿರ್ದೇಶಕ ವಿ.ಕಾಮಕೋಟಿ ನೇತೃತ್ವದ ಸಮಿತಿಯು ಈ ಶಿಫಾರಸು ಮಾಡಿದೆ. ಈ ಶಿಫಾರಸು ವಿದ್ಯಾರ್ಥಿಗಳಿಗೆ ವಿವಿಧ ಪ್ರಯೋಜನಗಳನ್ನು ಒದಗಿಸುತ್ತದೆ. ಅವುಗಳಲ್ಲಿ ಕೆಲವು ಪ್ರಮುಖವಾಗಿವೆ. ಯುಜಿ ಅಂತಿಮ ವರ್ಷದಲ್ಲಿ ಸಂಶೋಧನಾ ಯೋಜನೆಗಳು ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿರುತ್ತದೆ.
ನೇರ ನೇಮಕಾತಿ ಸಂದರ್ಶನ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನವೆಂಬರ್ 21ರಂದು ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಹಾಗಾದರೆ, ಎಷ್ಟು ಗಂಟೆಗೆ ನಡೆಯಲಿದೆ ಹಾಗೂ ಸಂದರ್ಶನಕ್ಕೆ ಬರುವವರು ಯಾವೆಲ್ಲಾ ದಾಖಲೆಗಳನ್ನು ತರಬೇಕಾಗುತ್ತದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಬೆಳಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್‌ಎಸ್ಎಲ್‌ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.












Click it and Unblock the Notifications