Get Updates
Get notified of breaking news, exclusive insights, and must-see stories!

Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣ: ರಾಜ್ಯ ಸಭೆಯಲ್ಲಿ ಮಹತ್ವದ ಚರ್ಚೆ

ನವದೆಹಲಿ, ಫೆಬ್ರವರಿ 03: ಬೆಂಗಳೂರು ದಿನದಿಂದ ದಿನಕ್ಕೆ ಜಾಗತಿಕವಾಗಿ ವೇಗವಾಗಿ ಬೆಳೆಯುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದೇಶದ ಪ್ರಮುಖ ನಗರಗಳು ಹಾಗೂ ವಿದೇಶಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಸಾವಿರಾರು ಮಂದಿ ಓಡಾಟ ನಡೆಸುತ್ತಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಎರಡನೇ ವಿಮಾನ ನಿಲಲ್ದಾಣ ನಿರ್ಮಿಸಲು ಯೋಜಿಸಿದೆ. ಆದರೆ, ನೂತನ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎಂಬುದರ ಕುರಿತು ಚರ್ಚೆಗಳು ನಡೆಯುತ್ತಿವೆ.

ಈಗಾಗಲೇ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಬೆಂಗಳೂರು ಬಳಿ 2ನೇ ಅಂತಾರಾಷ್ಟ್ರೀಯ ನಿರ್ಮಾಣಕ್ಕೆ ಸ್ಪರ್ಧೆ ನಡೆಯುತ್ತಿದೆ. ಇದರ ನಡುವೆ ಇಂದು(ಸೋಮಾವರ) ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹಾಗೂ ಸಂಸದರಾದ ಹೆಚ್‌ ಡಿ ದೇವೇಗೌಡರು ಧ್ವನಿ ಎತ್ತಿದ್ದಾರೆ.

Important discussion in Rajya Sabha on Bengaluru second airport

ಇಂದು(ಸೋಮವಾರ) ಸಂಸತ್‌ನ ಬಜೆಟ್‌ ಅಧಿವೇಶನದ ಮೂರನೇ ದಿನ ರಾಜ್ಯಸಭೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಸಂಸದ ಡಾ ಎಂ ತಂಬಿದುರೈ ಅವರು ವಿಮಾನಿ ನಿಲ್ದಾಣದ ವಿಚಾರವನ್ನು ಪ್ರಸ್ತಾಪಿಸಿ, ಹೊಸೂರು ಬಳಿ ವಿಮಾನ ನಿಲ್ದಾಣಕ್ಕೆ ಅನುಮತಿ ನೀಡಿ ಎಂದು ಸಂಸತ್‌ ನಲ್ಲಿ ಕೇಳಿಕೊಂಡಿದ್ದಾರೆ. ಇದಕ್ಕೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ಸರ್ಕಾರ ಕೂಡ ಏರ್‌ಪೋರ್ಟ್‌ ನಿರ್ಮಾಣಕ್ಕೆ ಮುಂದಾಗಿದೆ. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಕರ್ನಾಟಕ ಸರ್ಕಾರದ ಮನವಿಯನ್ನು ಪರಿಗಣಿಸಿ ಎಂದು ದೇವೇಗೌಡರು ಸಂಸತ್‌ ನಲ್ಲಿ ಹೇಳಿದರು.

ಇನ್ನೂ ಈ ವೇಳೆ ಡಾ ಎಂ ತಂಬಿದುರೈ ಮಾತನಾಡಿ, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಏರ್‌ ಟ್ರಾಫಿಕ್‌ ಬಹಳಷ್ಟು ಹೆಚ್ಚಾಗಿದೆ. ಆದ್ದರಿಂದ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರು ಬಳಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಆದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಮಸ್ಯೆ ಆಗುತ್ತಿದೆ. 25 ವರ್ಷಗಳ ಕಾಲ ಬೇರೆ ಏರ್‌ಪೋರ್ಟ್‌ ನಿರ್ಮಿಸಬಾರದು ಎಂಬ ನಿಯಮದಿಂದ ಸಮಸ್ಯೆಯಾಗುತ್ತಿದೆ. ಈಗಾಗಲೇ ದಿಲ್ಲಿ ಮತ್ತು ಹೈದ್ರಾಬಾದ್‌ನಲ್ಲಿ ಈ ನಿಯಮದಿಂದ ವಿನಾಯಿತಿ ನೀಡಿ ಹೊಸ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ನಿರ್ಮಿಸಲಾಗುತ್ತಿದೆ. ಅದೇ ರೀತಿ ಹೊಸೂರಿನಲ್ಲಿ ತಮಿಳುನಾಡು ಸರ್ಕಾರದಿಂದ ವಿಮಾನ ನಿಲ್ದಾಣ ನಿರ್ಮಿಸಲು ಅನುಮತಿ ನೀಡಬೇಕು ಎಂದು ಸಂಸತ್‌ನಲ್ಲಿ ಮನವಿ ಮಾಡಿದರು.

ಈ ಕುರಿತು ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್‌ ನಾಯ್ಡು ಅವರು ಮಾತನಾಡಿ, ಎಲ್ಲಿ ಬೇಡಿಕೆಯಿರುತ್ತದೋ ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ನಾವು ಬದ್ಧವಾಗಿದ್ದೇವೆ. ಆದರೆ, ಇಲ್ಲಿ 150 ಕಿಮೀ ಅಂತರದಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ ಆಗಬಾರದು ಎಂಬ ಒಪ್ಪಂದ ಈಗಾಗಲೇ ಜಾರಿಯಲ್ಲಿದೆ. ಹೊಸೂರು ಬೆಂಗಳೂರು ವಿಮಾನ ನಿಲ್ದಾಣದ 150 ಕಿಮೀ ವ್ಯಾಪ್ತಿಯಲ್ಲಿಯೇ ಬರುವುದರಿಂದ ಇದು ಸವಾಲಿನ ಕೆಲಸ, ತಮಿಳುನಾಡು ಸರ್ಕಾರ ಅಲ್ಲಿಯೇ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿದೆ. ಅದಕ್ಕೆ ಕೇಂದ್ರ ಕೂಡ ಸಹಕಾರ ನೀಡಲಿದೆ ಎಂದು ಹೇಳಿದರು.

ಇನ್ನೂ ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ತಂಬಿದುರೈ ಮನವಿಗೆ ವಿರೋಧ ವ್ಯಕ್ತಪಡಿಸಿದರು. ಕರ್ನಾಟಕ ಸರ್ಕಾರ ಈಗಾಗಲೇ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಲು ಪ್ರಸ್ತಾಪಿಸಿದೆ. ಕೇಂದ್ರ ವಿಮಾನಯಾನ ಸಚಿವರ ಜೊತೆಯೂ ಈ ಬಗ್ಗೆ ಮಾತುಕತೆ ನಡೆಸಿದೆ. ನೀವು ಏನೇ ನಿರ್ಧಾರ ತೆಗೆದುಕೊಂಡರು ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಕರ್ನಾಟಕ ಸರ್ಕಾರ ಕೂಡ ಎರಡನೇ ಏರ್‌ಪೋರ್ಟ್‌ ನಿರ್ಮಿಸಲು ಮುಂದಾಗಿದೆ. ನಾನು ಘೋಷಿಸಿದ ಬೆಂಗಳೂರು ಏರ್‌ಪೋರ್ಟ್‌ ಸದ್ಯದ ಏರ್‌ ಟ್ರಾಫಿಕ್‌ ನಿಭಾಯಿಸಲು ಆಗುತ್ತಿಲ್ಲ. ಆದ್ದರಿಂದ ಮತ್ತೊಂದು ವಿಮಾನ ನಿಲ್ದಾಣ ಅವಶ್ಯಕತೆಯಿದೆ. ಇದರ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಿಸುತ್ತೆ ಎಂಬ ಮಾಹಿತಿ ಇದೆ. ಸ್ಥಳ ಅಂತಿಮವಾದ ಬಳಿಕ ನಾವು ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

ತುಮಕೂರು ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರಸ್ತಾವನೆ ಸಲ್ಲಿಸಿದ್ದಾರೆ. ರಾಜ್ಯ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವರಿಗೆ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಆಸುಪಾಸಿನಲ್ಲಿ ನಿರ್ಮಿಸುವಂತೆ ಮನವಿ ಮಾಡಿದ್ದೇನೆ.‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಎರಡು ಕಡೆಗಳಲ್ಲಿ ಭೂಮಿಯನ್ನು ಗುರುತಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+