Toll Tax: ಟೋಲ್ ಪಾವತಿದಾರರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ
Toll Tax: ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯವು ಹೊಸ ನಿಯಮಗಳನ್ನು ಪ್ರಕಟಿಸಿದ್ದು, ಈಗ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ಬಳಸುವ ಖಾಸಗಿ ವಾಹನ ಚಾಲಕರು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಚಾಲಕರು 20 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಮಾತ್ರ ಟೋಲ್ ರಸ್ತೆಗಳನ್ನು ಬಳಸಿದರೆ. ಅಂತಹವರು ಯಾವುದೇ ಟೋಲ್ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಈ ಹೊಸ ನಿಯಮದ ಪ್ರಕಾರ, ಜಿಎನ್‌ಎಸ್‌ಎಸ್ ವ್ಯವಸ್ಥೆಯನ್ನು ಬಳಸುವ ಖಾಸಗಿ ವಾಹನ ಚಾಲಕರು ಪ್ರತಿದಿನ 20 ಕಿಲೋ ಮೀಟರ್‌ವರೆಗಿನ ಪ್ರಯಾಣಕ್ಕೆ ಯಾವುದೇ ಟೋಲ್ ಪಾವತಿಸಬೇಕಾಗಿಲ್ಲ.

ಆದರೆ, ಅವರು 20 ಕಿಲೋ ಮೀಟರ್‌ಗಿಂತ ಹೆಚ್ಚು ಪ್ರಯಾಣ ಮಾಡಿದರೆ ಮಾತ್ರ, ಪ್ರಯಾಣ ದೂರದ ಆಧಾರದ ಮೇಲೆ ಟೋಲ್ ಪಾವತಿಸಬೇಕಾಗುತ್ತದೆ. ಈ ನಿಯಮ ಇಡೀ ದೇಶದಲ್ಲಿ ಅನ್ವಯ ಆಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಕೇಂದ್ರ ಸಚಿವಾಲಯವು ಕೆಲವು ದಿನಗಳ ಹಿಂದೆ ಫಾಸ್ಟ್ಯಾಗ್ ಜೊತೆಗೆ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್) ಆಧಾರಿತ ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜಿಸಿತ್ತು. ಇದೀಗ ಈ ವ್ಯವಸ್ಥೆಯನ್ನು ಕೆಲವು ರಾಜ್ಯಗಳಲ್ಲಿ ಮಾತ್ರ ಪ್ರಾಯೋಗಿಕ ಯೋಜನೆಯಾಗಿ ಜಾರಿಗೆ ತರಲಾಗಿದೆ.
ಪ್ರಸ್ತುತ ಇದನ್ನು ಕರ್ನಾಟಕದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಮತ್ತು ಹರಿಯಾಣದ ಪಾಣಿಪತ್-ಹಿಸಾರ್ ರಾಷ್ಟ್ರೀಯ ಹೆದ್ದಾರಿ 709ರಲ್ಲಿ ಪರೀಕ್ಷಿಸಲಾಗುತ್ತಿದೆ. ಇದರ ಯಶಸ್ಸಿನ ನಂತರ, ದೇಶಾದ್ಯಂತ ಇತರ ಹೆದ್ದಾರಿಗಳಲ್ಲಿ ಇದನ್ನು ಜಾರಿಗೆ ತರಲು ಸರ್ಕಾರ ಯೋಜನೆ ರೂಪಿಸುತ್ತಿದೆ.
3 ಅಂಡರ್‌ಪಾಸ್ ನಿರ್ಮಾಣಕ್ಕೆ ಪ್ಲಾನ್: ಬೆಂಗಳೂರು ಅಂದರೆ ಮೊದಲಿಗೆ ನೆನಪಿಗೆ ಬರುವುದೇ ಟ್ರಾಫಿಕ್. ಇಲ್ಲಿ ವಾಹನ ಸವಾರರು ಟ್ರಾಫಿಕ್‌ನಿಂದ ತಪ್ಪಿಸಿಕೊಂಡು ಹೋಗುವುದೇ ಒಂದು ಸವಾಲಾಗಿ ಪರಿಣಮಿಸಿದೆ. ಅದರಲ್ಲೂ ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆಯೊಂದನ್ನು ಹಾಕಿಕೊಂಡಿದೆ.
ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ದಿನದಿಂದ ದಿನಕಗಕೆ ಸಂಚಾರ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊಡಿಗೇಹಳ್ಳಿ, ಬ್ಯಾಟರಾಯನಪುರ, ಜಕ್ಕೂರು ಮತ್ತು ಅಲ್ಲಾಳಸಂದ್ರದಂತಹ ಪ್ರಮುಖ ಜಂಕ್ಷನ್‌ಗಳಲ್ಲಿ ಅಂಡರ್‌ಪಾಸ್‌ಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಾಗಿದ್ದು, ಈ ಮಾರ್ಗದಲ್ಲಿ ಸಾಗುವ ಪ್ರಯಾಣವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿವೆ ಎಂದು ತಿಳಿದುಬಂದಿದೆ.












Click it and Unblock the Notifications