ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ 100 ದಿನ

ನವದೆಹಲಿ, ಏಪ್ರಿಲ್ 26: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಆರಂಭವಾಗಿ 100 ದಿನ ಪೂರೈಸಿದ್ದು, ಈವರೆಗೂ 14.16 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 9,95,288 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 6,85,944 ಮಂದಿಗೆ ಮೊದಲ ಡೋಸ್ ಹಾಗೂ 3,09,344 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 14,19,11,223 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 92,98,092 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 60,08,236 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,19,87,192 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 63,10,273 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 100 Days 14.19 Crore Beneficiaries Got Vaccinated Against Coronavirus Across India

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ:

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,81,08,293 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 24,03,633 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,98,72,209 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 79,23,295 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಮೂರು ಮಾದರಿ ಲಸಿಕೆಗೆ ಅನುಮೋದನೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+