ಭಾರತದಲ್ಲಿ 14.50 ಕೋಟಿಗೂ ಅಧಿಕ ಜನರಿಗೆ ಕೊರೊನಾ ಲಸಿಕೆ

ನವದೆಹಲಿ, ಏಪ್ರಿಲ್ 27: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆ ಮಾರ್ಗವನ್ನು ಕಂಡುಕೊಳ್ಳಲಾಗಿದೆ. ಪ್ರತಿನಿತ್ಯ ಲಕ್ಷ ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗುತ್ತಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಆರಂಭವಾಗಿ 101 ದಿನವಾಗಿದ್ದು, ಈವರೆಗೂ 14.50 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಸೋಮವಾರ ರಾತ್ರಿ 8 ಗಂಟೆ ವೇಳೆಗೆ 31 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ31,74,688 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 19,73,778 ಮಂದಿಗೆ ಮೊದಲ ಡೋಸ್ ಹಾಗೂ12,00,910 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 14,50,85,911 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

In 101 Days 14.50 Crore Beneficiaries Got Vaccinated Against Coronavirus Across India

ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ:

ಭಾರತದಲ್ಲಿ ಈವರೆಗೂ 93,23,439 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 60,59,065 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,21,00,254 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 64,11,024 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ:

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,92,77,949 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 26,78,151 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,05,37,922 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 86,98,107 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಮೂರು ಮಾದರಿ ಲಸಿಕೆಗೆ ಅನುಮೋದನೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+