ಭಾರತದಲ್ಲಿ ಒಂದೇ ದಿನ 25,56,182 ಜನರಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಏಪ್ರಿಲ್ 28: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಹರಡುವಿಕೆ ವೇಗ ಹೆಚ್ಚುವುದರ ನಡುವೆ ಲಸಿಕೆ ವಿತರಣೆ ಅಭಿಯಾನನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಆರಂಭವಾಗಿ 102 ದಿನ ಕಳೆದಿದೆ. ಈವರೆಗೂ 14.78 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಸೋಮವಾರ ರಾತ್ರಿ 8 ಗಂಟೆ ವೇಳೆಗೆ 25 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 25,56,182 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 15,69,000 ಮಂದಿಗೆ ಮೊದಲ ಡೋಸ್ ಹಾಗೂ 9,87,182 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 14,78,27,367 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

In 102 Days 14.78 Crore Beneficiaries Got Vaccinated Against Coronavirus Across India

ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ:

ಭಾರತದಲ್ಲಿ ಈವರೆಗೂ93,47,775 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 61,06,237 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,22,21,975 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 65,26,378 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ:

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,02,74,581 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 29,27,452 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ5,10,85,677 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 93,37,292 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+