ಭಾರತದಲ್ಲಿ 15.22 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಏಪ್ರಿಲ್ 30: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ವೇಗ ಹೆಚ್ಚುತ್ತಿರುವುದರ ನಡುವೆ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. 104 ದಿನಗಳಲ್ಲಿ 15,22,45,179 ಜನರಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಆರಂಭವಾಗಿ 104 ದಿನಗಳು ಪೂರ್ಣವಾಗಿದೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ 20 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 20,84,931 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 11,82,563 ಮಂದಿಗೆ ಮೊದಲ ಡೋಸ್ ಹಾಗೂ 9,02,368 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

In 104 Days 15.22 Crore Beneficiaries Got Vaccinated Against Coronavirus Across India

ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ:

ಭಾರತದಲ್ಲಿ ಈವರೆಗೂ 93,85,676 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 61,89,635 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,24,12,904 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 67,04,193 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ:

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,17,23,607 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 34,02,049 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,18,72,503 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,04,14,996 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಮೂರು ಮಾದರಿ ಲಸಿಕೆಗೆ ಅನುಮೋದನೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+