ಕೊರೊನಾಗೆ ಚುಚ್ಚಿದ ಮದ್ದು; ಭಾರತದಲ್ಲಿ ಲಸಿಕೆ ಹಾಕಿಸಿಕೊಂಡವರ ಲೆಕ್ಕ!?

ನವದೆಹಲಿ, ಮೇ 04: ಭಾರತದಲ್ಲಿ ಪ್ರತಿನಿತ್ಯ 3 ಲಕ್ಷಕ್ಕಿಂತ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಕೊವಿಡ್-19 ಸೋಂಕಿನ ನಿಯಂತ್ರಣಕ್ಕಾಗಿ ಸೋಂಕಿನ ತಪಾಸಣೆ ಹಾಗೂ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 108 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ ದೇಶದ 15,89,32,921 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಮೇ 3ರಂದು ಒಂದೇ ದಿನ 17,08,390 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 8,38,343 ಜನರಿಗೆ ಮೊದಲ ಡೋಸ್ ಹಾಗೂ 8,70,047 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ದೇಶದ 11 ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ದೇಶದ 11 ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗ ಹೆಚ್ಚುತ್ತಿರುವ ಹಿನ್ನೆಲೆ 11 ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಕಾರ್ಯ ಆರಂಭಿಸಲಾಗಿದೆ. ಕಳೆದ ಮೇ 1ರಿಂದ ಈವರೆಗೂ 4,06,339 ಜನರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ ಛತ್ತೀಸ್ ಗಢ 1025, ನವದೆಹಲಿ 40,028, ಗುಜರಾತ್ 1,08,191, ಜಮ್ಮು ಮತ್ತು ಕಾಶ್ಮೀರ 55,565, ಕರ್ನಾಟಕ 2,353, ಮಹಾರಾಷ್ಟ್ರ 73,714, ಒಡಿಶಾ 6,802, ಪಂಜಾಬ್ 635, ರಾಜಸ್ಥಾನ 76,151, ತಮಿಳುನಾಡು 2,744, ಹಾಗೂ ಉತ್ತರ ಪ್ರದೇಶದಲ್ಲಿ 33,544 ಮಂದಿಗೆ ಲಸಿಕೆ ನೀಡಲಾಗಿದೆ.

ಆರೋಗ್ಯ ಕಾರ್ಯಕರ್ತರು, ಕಾರ್ಮಿಕರಿಗೆ ಲಸಿಕೆ

ಆರೋಗ್ಯ ಕಾರ್ಯಕರ್ತರು, ಕಾರ್ಮಿಕರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 94,48,289 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 62,97,900 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,35,05,877 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 72,66,380 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,30,50,669 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 41,42,786 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,28,16,238 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,19,98,443 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಮೂರು ಮಾದರಿ ಲಸಿಕೆ ವಿತರಣೆಗೆ ಸರ್ಕಾರದಿಂದ ಅವಕಾಶ

ಮೂರು ಮಾದರಿ ಲಸಿಕೆ ವಿತರಣೆಗೆ ಸರ್ಕಾರದಿಂದ ಅವಕಾಶ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ದೇಶದಲ್ಲಿ ಕೊರನಾವೈರಸ್ ಅಂಕಿ-ಸಂಖ್ಯೆಗಳು

ದೇಶದಲ್ಲಿ ಕೊರನಾವೈರಸ್ ಅಂಕಿ-ಸಂಖ್ಯೆಗಳು

ಕೊರೊನಾವೈರಸ್ ಸಾಂಕ್ರಾಮಿಕ ಅಲೆಯ ಪ್ರಮಾಣ ಭಾರತದಲ್ಲಿ ಕಿಂಚಿತ್ತೂ ಕಡಿಮೆಯಾದಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 3,57,229 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3,449 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,20,289 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,02,82,833 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 1,66,13,292 ಸೋಂಕಿತರು ಈವರೆಗೂ ಗುಣಮುಖರಾಗಿದ್ದು, 2,22,408 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 34,47,133 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+